ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು

ಬೆಂಗಳೂರು, ಡಿಸೆಂಬರ್ 30: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ (pratap simha) ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ. ಮೌಲ್ಯದ 126 ಮರ ಕಡಿದು ಸಾಗಿಸಿದ ಆರೋಪದಡಿ ವಿಕ್ರಮ್ ಸಿಂಹ ವಿರುದ್ಧ ಕೇಸ್ ದಾಖಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ವಿಕ್ರಮ್ ವಿಚಾರಣೆ ಮಾಡಲಾಗುತ್ತಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯಲ್ಲಿ ಜಯಮ್ಮರಿಗೆ ಸೇರಿದ ಸರ್ವೆ ನಂಬರ್ 16/P2ರಲ್ಲಿರುವ 3.10 ಎಕರೆ ಜಮೀನು ಪಡೆದಿದ್ದ ವಿಕ್ರಮ್ ಸಿಂಹ, ಶುಂಠಿ ಬೆಳೆಯಲು ಜಮೀನು ಪಡೆದು ಅಗ್ರಿಮೆಂಟ್ ಮಾಡಿಕೊಂಡಿದ್ದರು.