ಚಾಮರಾಜನಗರ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟಿದ್ದ ಗೋಡಾಮಿನ ಮೇಲೆ ದಾಳಿ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶ

WhatsApp Group Join Now

ಚಾಮಾಜನಗರ: ತಾಲ್ಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮಂಗಳವಾರ (ಮಾರ್ಚ್‌.25) ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಮತ್ತು ಪಟ್ಟಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 2 ಟನ್‌ಗೂ ಅಧಿಕ ಅಕ್ಕಿ ವಶಕ್ಕೆ ಪಡೆದ ಘಟನೆ ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ನಡೆದಿದೆ.

ಈ ಕುರಿತು ಗ್ರಾಮಾಂತರ ಪ್ರದೇಶದಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಆಧಾರದ ಮೇಲೆ ಅಕ್ಕಿ ಖರೀದಿಸಿದ ಗೋಡಾಮಿನ ಮೇಲೆ ಪರಿಶೀಲನೆ ನಡೆಸಿದ್ದು, ಸುಮಾರು 2,200 ಕೆ.ಜಿ.ಗೂ ಅಧಿಕ ಪಡಿತರ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.

ಗ್ರಾಮಾಂತರ ಪ್ರದೇಶದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author