ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಡಿಕೆಶಿ ಟೆಂಪಲ್ ರನ್ ಜೋರಾಗಿದೆ.

WhatsApp Group Join Now

ಗೋಕರ್ಣ ಲೋಕ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ.
ಧರ್ಮಸ್ಥಳದಿಂದ ದೇವಸ್ಥಾನದ ಭೇಟಿ, ಪ್ರಾರ್ಥನೆ, ಪೂಜೆ ಸಲ್ಲಿಕೆ ಆರಂಭಿಸಿದ ಡಿಸಿಎ ಡಿಕೆ ಶಿವಕುಮಾರ್ ಇಂದು ಗೋಕರ್ಣಕ್ಕೆ ಆಗಮಿಸಿ ಶಿವನ ಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಗೋಕರ್ಣ ಆತ್ಮಲಿಂಗ ಪೂಜೆ ಸಲ್ಲಿಸುವ ವೇಳೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಅರ್ಚಕರು ಸಂಕಲ್ಪ ಮಾಡಿದರು. ಈ ಬಗ್ಗೆ ದೇವಸ್ಥಾನದ ಹೊರಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್ ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ. ಗೋಕರ್ಣ ಆತ್ಮಲಿಂಗ ಪೂಜೆ
ವೇಳೆ ಡಿ.ಕೆ. ಶಿವಕುಮಾರ್ ಮುಂದೆ ಮುಖ್ಯಮAತ್ರಿ ಆಗಲಿದ್ದಾರೆ ಎಂದು ದೇವರ ಮುಂದೆ ಅರ್ಚಕರು ಸಂಕಲ್ಪ ಮಾಡಿಕೊAಡಿದ್ದಾರೆ. ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. ಕೆಲವರು ನನ್ನನ್ನು ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನು ತಪ್ಪಿಸಲು ಸಾಧ್ಯವೇ, ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಡಿದ್ದೇನೆ ಎಂದರು.

About The Author