ಧಾರವಾಡ ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಧಾರವಾಡ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೆಪ್ಟೆಂಬರ 6 ರಂದು ಬೆಳಿಗ್ಗೆ 10:30 ಗಂಟೆಯಿಂದ 11:30 ರವರೆಗೆ ನೊಡಲ್ ಅಧಿಕಾರಿ ಡಾ. ಸರಸ್ವತಿದೇವಿ ಭಗವತಿ ಅವರು ಸಂಘಟಿಸಲಿದ್ದಾರೆ.
ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಎಲ್ಲ ತಾಲೂಕುಗಳಲ್ಲಿ ಸ್ಪರ್ಧಿಸಿ, ತಾಲೂಕು ಮಟ್ಟದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.
ಮಹಾತ್ಮಾ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ತಾಲೂಕು ಮಟ್ಟದಲ್ಲಿ ಪ್ರಬಂಧ ಸ್ಪರ್ಧೆಯನ್ನು ಇಂದು (ಸೆ.04) ಯಶಸ್ವಿಯಾಗಿ ಆಯೋಜಿಸಲಾಗಿತ್ತು. ತಾಲೂಕಿನಾದ್ಯಂತ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ, ತಮ್ಮ ಚಿಂತನೆಗಳನ್ನು ಮತ್ತು ಬರವಣಿಗೆಯ ಸಾಮಥ್ರ್ಯವನ್ನು ಪ್ರದರ್ಶಿಸಿದರು.
ಇಂದು (ಸೆ.04) ಬೆಳಿಗ್ಗೆ ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಮಹಾತ್ಮಾ ಗಾಂಧೀಜಿಯವರ 156ನೇ ಜಯಂತಿ ಅಂಗವಾಗಿ ಧಾರವಾಡ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ನಿರ್ಣಾಯಕರ ಮಂಡಳಿಯು ಪ್ರಬಂಧಗಳನ್ನು ಪರಿಶೀಲಿಸಿ, ಅತ್ಯುತ್ತಮ ಬರವಣಿಗೆ, ವಿಷಯದ ಆಳವಾದ ತಿಳುವಳಿಕೆ ಮತ್ತು ಬರವಣಿಗೆಯ ಶೈಲಿಯನ್ನು ಆಧರಿಸಿ ತಾಲೂಕು ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಗಳ ವಿಜೇತರನ್ನು ಆಯ್ಕೆ ಮಾಡಲಾಗಿದೆ. ಸ್ಪರ್ಧೆಯಲ್ಲಿ 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಲಿದ್ದು, ಪ್ರೌಢಶಾಲೆ, ದ್ವಿತೀಯ ಪಿಯುಸಿ, ಪದವಿ ಮತ್ತು ಸ್ನಾತಕೋತರ ಪದವೀಧರರು ಭಾಗವಹಿಸಲಿದ್ದಾರೆ.
ತಾಲೂಕಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಲಾಗುವುದು. ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗುತ್ತಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.