WhatsApp Group
Join Now
ಧಾರವಾಡ ಏಪ್ರಿಲ್ 25: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ.
ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.