ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ

ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ
WhatsApp Group Join Now

ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ ಎಂದರು.

ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ  ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ(Krishna Byre Gowda) ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಅವರು ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ. ಒಂದು ವರ್ಷಕ್ಕೆ 14 ಸಾವಿರ ಕೋಟಿ ರಾಜ್ಯಕ್ಕೆ ಬರಬೇಕಾದ ಪಾಲು ಕುಂಟಿತ ಆಗಿದ್ದು, 5 ವರ್ಷದಲ್ಲಿ 62 ಸಾವಿರ ಕೋಟಿ ನಷ್ಟ ಉಂಟಾಗುತ್ತದೆ ಎಂದರು.

About The Author