WhatsApp Group
Join Now
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಆಯೋಗದ ಸಿಬ್ಬಂದಿಗಳು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿನೀಡಿ, ಸ್ಟಿಕ್ಕರ್ ಅಂಟಿಸಿದರು.

ಇದೇ ಮಾದರಿಯಲ್ಲಿ ರಾಜ್ಯದ ಪ್ರತಿ ಮನೆಗೆ ಸಿಬ್ಬಂದಿಗಳು ಭೇಟಿನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಈ ವೇಳೆ ಅವರಿಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರು ಹೇಳಿದರು.