WhatsApp Group
Join Now
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕಾರ್ಮಿಕ ಇಲಾಖೆಯ ವತಿಯಿಂದ ಪಿಯುಸಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿ ಮಾತನಾಡಿದರು ವಿದ್ಯಾರ್ಥಿಗಳಿಗೆ ನೀಡಿದ ಲ್ಯಾಪ್ ಟಾಪ್ ಸದ್ಬಳಕೆ ಆಗಬೇಕು. ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಈ ಯೋಜನೆ ಜಾರಿಗೆ ತಂದಿದೆ. ಇದರ ಬಳಕೆ ಮೌಲ್ಯದಾಯಕವಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಒಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಉಪ ಕಾರ್ಮಿಕ ಆಯುಕ್ತರಾದ ಅನ್ಸಾರಿ, ಕಾರ್ಮಿಕ ಅಧಿಕಾರಿ ತರುನ್ನಂ ಬೆಂಗಾಲಿ, ಮಲ್ಲಿಕಾರ್ಜುನ ಜೋಗೂರ್, ಕಾರ್ಮಿಕ ನಿರೀಕ್ಷಕರಾದ ರಮೇಶ ಕೆಸರೂರ, ರಾಜೇಶ ಅಸ್ನೋಟಿಕರ್ ಸೇರಿದಂತೆ ಮತ್ತಿತರು ಹಾಜರಿದ್ದರು.