WhatsApp Group
Join Now
ಮಂಡ್ಯ: ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿರುವುದು ಕರ್ನಾಟಕ ಸರ್ಕಾರದ ಸೇಡಿನ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ವಾಲ್ಮೀಕಿ ಕಲ್ಯಾಣ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳು ಬಯಲಾಗಿದೆ.
ಇದನ್ನು ಮುಚ್ಚಿಹಾಕಲು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಸೇಡಿನ ರಾಜಕಾರಣ ಮಾಡುವ ಉದ್ದೇಶ ದಿಂದ ಮಾಜಿ ಮಂತ್ರಿಗಳು ಸೇರಿದಂತೆ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಶೆಟ್ಟರ್ ದೂರಿದ್ದಾರೆ.