ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.

WhatsApp Group Join Now

ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿಯಲ್ಲಿ ವಿಶಾಲವಾದ ಜಾಗೆಯಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ರಾಯಣ್ಣನ ಕೆಚ್ಚೆದೆಯ ಬದುಕು ಅನಾವರಣಗೊಳಿಸುವ ಆಕರ್ಷಕ ಶಿಲ್ಪವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಲೋಕಾರ್ಪಣೆಗೊಳಿಸಿದರು.

ಬೆಳಗಾವಿ ಜಿಲ್ಲಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಸಂಗೊಳ್ಳಿ ಹಿರೇಮಠದ ಗುರು ಸಿದ್ಧಲಿಂಗೇಶ್ವರ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಮತ್ತಿತರರು ಇದ್ದರು
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಸುರೇಶ್ ಬಿ.ಎಸ್., ಸರಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಶಾಸಕರಾದ ಆಸಿಫ್ ಸೇಠ್, ಗಣೇಶ್ ಹುಕ್ಕೇರಿ, ಬಾಬಾಸಾಹೇಬ್ ಪಾಟೀಲ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ್ ವೈದ್ಯ, ಮಾಜಿ ಸಚಿವರಾದ ಎಚ್.ವೈ.ಮೇಟಿ, ಎಚ್.ಎಂ.ರೇವಣ್ಣ, ಸೇರಿದಂತೆ ಅನೇಕ‌ ಜನಪ್ರತಿನಿಧಿಗಳು ಭಾಗವಹಿಸಿದ್ದರು


ಸೈನಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಛಾಯಾಚಿತ್ರ ತೆಗೆಸಿಕೊಂಡು ಶುಭ ಹಾರೈಸಿದರು.
ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ:
ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯಲ್ಲಿ ಕಿತ್ತೂರು ಸಂಸ್ಥಾನದಲ್ಲಿ ವೀರತನಕ್ಕೆ ಹೆಸರಾದ ರೋಗಣ್ಣವರ ಮನೆ, ಹುಲಿಯೊಂದಿಗೆ ಹೋರಾಡುತ್ತಿರುವ ರಾಯಣ್ಣನ ತಂದೆ ಭರಮಪ್ಪ: ಭರಮಪ್ಪನ ಸಾಹಸ ಮೆಚ್ಚಿ ದೊರೆ ಮಲ್ಲಸರ್ಜ ರಕ್ತಮಾನ್ಯ ಭೂಮಿಯನ್ನು ನೀಡುವ ದೃಶ್ಯ.
ಭರಮಪ್ಪ ಹಾಗೂ ಕೆಂಚಮ್ಮ ದಂಪತಿಗೆ ಜನಿಸಿದ ಮಗುವಿಗೆ ರಾಯಣ್ಣ ಎಂದು‌ ನಾಮಕರಣ ದೃಶ್ಯ, ಕುಸ್ತಿ ಕಣದಲ್ಲಿ ಆಡಿ ಗೆದ್ದ ತರುಣ ರಾಯಣ್ಣ; ಕುಸ್ತಿಯಲ್ಲಿ ಗೆದಗದ ರಾಯಣ್ಣನಿಗೆ ದೊರೆ ಖಡ್ಗ ನೀಡುವುದು; ಕಿತ್ತೂರು ರಾಣಿ ಚೆನ್ಮಮ್ಮನ ದರ್ಬಾರ್; ಬ್ರಿಟೀಷರೊಂದಿಗಿನ ಮೊದಲ ಆಂಗ್ಲೋ-ಕಿತ್ತೂರು ಯುದ್ಧ; ಹೀಗೆ ರಾಯಣ್ಣನ ಬಾಲ್ಯದಿಂದ ಹಿಡಿದು ಕೊನೆ ಗಳಿಗೆಯ ಹೋರಾಟದ ದೃಶ್ಯಗಳು ಶಿಲ್ಪವನದಲ್ಲಿ ಜೀವ ಪಡೆದುಕೊಂಡಿವೆ.

ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ.

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ.

About The Author