
WhatsApp Group
Join Now
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ಮಾಡುವುದರೊಂದಿಗೆ ಗ್ರಾಹಕರಿಗೆ ಬಿಗ್ ಆಫರ್ ನೀಡಿದೆ.
ನಡೆದ ಸಚಿವ ಸಂಪುಟದಲ್ಲಿ ಶೇಕಡವಾರು 10ರಷ್ಟು ಬದಲು 10 ಯುನಿಟ್ ಫ್ರೀ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ.
ಸಚಿವ ಹೆಚ್.ಕೆ.ಪಾಟೀಲ್ ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ್ದಾರೆ. ಈ ಮೊದಲು ಗೃಹ ಜ್ಯೋತಿ ಯೋಜನೆ ಅಡಿ ಬಳಸಿದ ಯುನಿಟ್ಗಿಂತ ಶೇ. 10ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.
ಮುಂದಿನ ತಿಂಗಳ ಬಿಲ್ ನಿಂದಲೇ ಇದನ್ನ ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ.