ರಾಮದುರ್ಗ ಏ.5 ರಂದು ಡಾ| ಬಾಬು ಜಗಜೀವನ್‌ರಾಮ್ ಹಾಗೂ ಸಂವಿಧಾನಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಜಯಂತಿಯನ್ನು ಏ.14 ರಂದು ತಾಲೂಕಾಡಳಿತ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲು ರಾಮದುರ್ಗ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಸರಕಾರದ ನಿರ್ದೇಶನದಂತೆ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಅಂಬೇಡ್ಕರ ಹಾಗೂ ಜಗಜೀವನ್‌ರಾಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆಚರಣೆ ಮಾಡಿದ ನಂತರ ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆಯುವ ಜಯಂತಿ ಆಚರಣೆ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಅಂಬೇಡ್ಕರ ಜಯಂತಿಯAದು ಅಂಬೇಡ್ಕರ ಅವರ ಭಾವಚಿತ್ರದ ಮೆರವಣಿಗೆ ಪಟ್ಟಣದ ತಾ.ಪಂ ಆವರಣದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಂತರ ಪುರಸಭೆ ಸಾಂಸ್ಕೃತಿಕ ಭವನದಲ್ಲಿ ಪ್ರತಿವರ್ಷದಂತೆ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸತ್ಕಾರ ಹಾಗೂ ಉಪನ್ಯಾಸ ಜರುಗಲಿದೆ. ದಲಿತ ಸಮುದಾಯ ಸೇರಿದಂತೆ ತಾಲೂಕಿನ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಇಓ ಬಸವರಾಜ ಐನಾಪೂರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪರಶುರಾಮ ಪತ್ತಾರ, ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಡಾ| ಬಾಬು ಜಗಜೀವನರಾಮ್ ಹಾಗೂ ಅಂಬೇಡ್ಕರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿದರು.

WhatsApp Group
Join Now