ಧಾರವಾಡ ನೀರಿನ ಕುಡಿಯುವ ಸಮಸ್ಯೆ ಚರ್ಚೆ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ್ ಅವರಿಂದ ಸಭೆ

WhatsApp Group Join Now

ಧಾರವಾಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.
ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮವನ್ನು ಅನುಸರಿಸಬೇಕು. ನೀರು ಪೂರೈಸಲು ವಿದ್ಯುತ್ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ನಂತರ ನವಲಗುಂದ ಕ್ಷೇತ್ರದ ಶಾಸಕರಾದ ಎನ್.ಹೆಚ್. ಕೋನರೆಡ್ಡಿ ಅವರು ಮಾತನಾಡಿ, ಕರೆಂಟ್‍ನಲ್ಲಿ ಸೊಲಾರ್ ಸಿಸ್ಟಮ್‍ನ್ನು ಅಳವಡಿಸಿಕೊಂಡರೆ ಒಳ್ಳೆಯದು. ವಿದ್ಯುತ್ ಮತ್ತು ಸೊಲಾರ್ ಎರಡು ಬಳಕೆಯಿಂದ ಕರೆಂಟ್‍ನ ಅಭಾವವನ್ನು ತಪ್ಪಿಸಬಹುದು ಹಾಗೂ ಇದನ್ನು ಆದಷ್ಟು ಬೇಗನೆ ಕಾರ್ಯರೂಪಕ್ಕೆ ತರಲು ಹೇಳಿದರು.

ಸಭೆಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೀಜ್, ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ, ಕೆ.ಯು.ಐ.ಡಿ.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕ ಶರತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು

About The Author