ಧಾರವಾಡ : 2025-26 ನೇ ಸಾಲಿನ ಧಾರವಾಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಲಾಯಿತು.
ಅಪರ ಜಿಲ್ಲಾಧಿಕಾರಿ ಗೀತಾ. ಸಿ.ಡಿ. ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಮಾತನಾಡಿದರು. ತಮ್ಮ ಶಾಲಾ ದಿನಗಳಲ್ಲಿ ವಿಪರೀತ ಮಳೆಯಲ್ಲಿ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ನೆನೆಪನ್ನು ಸ್ಮರಿಸಿದರು. ತಾವು ಕ್ರೀಡೆಯಲ್ಲಿ ಆಸಕ್ತಿಯಿಂದ ಸೋಲು ಗೆಲವು ಎನ್ನದೇ ಭಾಗವಹಿಸುವಿಕೆ ಮುಖ್ಯವೆಂದು ತಿಳಿದು ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದವು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಮಾತನಾಡಿದರು. ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಆಗಮನವಾಯಿತು. ಎಲ್ಲ ಕ್ರೀಡಾಪಟುಗಳಿಗೆ ಶಿಲ್ಪಾ ಹೊಸಮನಿ ಇವರಿಂದ ಪ್ರತಿಜ್ಞಾವಿಧಿ ಭೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಭಾರ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ ಅವರು ಸ್ವಾಗತಿಸಿದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಕಬಡ್ಡಿ ತರಬೇತುದಾರ ರಂಗನಾಥ ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕ ಪಡತಾರೆ ಹಾಗೂ ರಾಜ್ಯ ಓಲಂಪಿಕ್ ಕ್ರೀಡಾಕೂಟದ ಪದಕ ವಿಜೇತರು ಉಪಸ್ಥಿತರಿದ್ದರು.