ಬೆಲೆ ಏರಿಕೆ ವಿರುದ್ಧ ರಾಮದುರ್ಗದಲ್ಲಿ ಬಿಜೆಪಿಯಿಂದ ಪ್ರತಿಭಟನೆ

WhatsApp Group Join Now

ಅಗತ್ಯ ವಸ್ತುಗಳ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಮದುರ್ಗ ಪಟ್ಟಣದ ತಾಲ್ಲೂಕು ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ-ತೆರಿಗೆ ಹೆಚ್ಚಳದ ಸರಕಾರದ ನೀತಿಗಳ ವಿರುದ್ಧ ಹಾಗೂ ಏರಿಸಿದ ಬೆಲೆಯನ್ನು ಹಿಂಪಡೆಯಲು ಆಗ್ರಹಿಸಿ, ಎಸ್.ಸಿ-ಎಸ್.ಟಿ ಮೀಸಲು ಹಣದ ದುರ್ಬಳಕೆಯನ್ನು ಖಂಡಿಸಿ ಮತ್ತು ಬಿಜೆಪಿಯ 18 ಶಾಸಕರ ಅಮಾನತನ್ನು ಖಂಡಿಸಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಇವರಿಗೆ ಮನವಿ ಸಲ್ಲಿಸಿದರು.

ಬೆಲೆ ಏರಿಕೆಯಿಂದ ಜನರ ಮೇಲೆ ಹೊರೆ ಬಿದ್ದಿದೆ. ಹಾಲಿನ ದರ, ವಿದ್ಯುತ್ ದರ. ಬಸ್ ಪ್ರಯಾಣ ದರ, ಸ್ಟಾಂಪ್ ಶುಲ್ಕ, ಮದ್ಯದ ದರ ಹೆಚ್ಚಳವು ಜನಸಾಮಾನ್ಯರ, ಮಧ್ಯಮ ವರ್ಗದವರ ಬದುಕಿಗೆ ಕೊಡಲಿ ಏಟು ನೀಡಿದ ಸರ್ಕಾರ. ದಿನೇ ದಿನೇ ಹೊಸ ಹೊಸ ತೆರಿಗೆಗಳನ್ನು ವಿಧಿಸಲಾಗುತ್ತಿದೆ. ಕೆಲದಿನಗಳ ಹಿಂದೆ ಸರ್ಕಾರದ ನಿರ್ಧಾರದಿಂದ ಡಿಸೇಲ್ ದರವೂ ಹೆಚ್ಚಿದ್ದು, ದಿನ ಬಳಕೆ ವಸ್ತುಗಳು, ಸರಕು ಸಾಮಗ್ರಿಗಳ ದರವೂ ಏರಿಕೆ ಕಂಡಿದೆ. ಆದ್ದರಿಂದ ಸರ್ಕಾರವು ಈ ಕೂಡಲೇ ಏರಿಸಿದ ಎಲ್ಲಾ ದರಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನೆ ನಡೆಸಿದರು.

ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಸರಕಾರಿ ಕಾಮಗಾರಿಗಳಲ್ಲಿ ಶೇ. 4 ರಷ್ಟು ಮೀಸಲಾತಿ ಕೊಡುವ ಸರಕಾರದ ತುಷ್ಟಿಕರಣದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ. ಬಾಬಾಸಾಹೇಬ ಡಾ. ಬಿ.ಆರ್ ಅಂಬೇಡ್ಕರ್‌ರವರ ರಚಿಸಿದ ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿ ಕೊಡಲು ಅವಕಾಶವಿಲ್ಲ. ಇದರ ನಡುವೆ ಮೀಸಲಾತಿ ನೀಡಲಾಗಿದೆ. ಇದು ಅತ್ಯಂತ ಖಂಡನಾರ್ಹ. ಇದಿಷ್ಟೇ ಅಲ್ಲ, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ 20 ಲಕ್ಷ ಬದಲು 30 ಲಕ್ಷ ಕೊಡುವುದಾಗಿ ತಿಳಿಸುವುದು, ಕೇವಲ ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆಗೆ ಸಂಬಂಧಿಸಿ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿರುವುದು ಸರಿಯೇ ಎಂದು ಪ್ರಶ್ನೆ ಮಾಡಲೇಬೇಕಾಗಿದೆ. ಈ ಸರಕಾರ ತುಷ್ಟಿಕರಣದ ನೀತಿಯಿಂದ ಅನುಸರಿಸಿ ಕರ್ನಾಕಟ ಜನರಿಗೆ ಪಕ್ಷಪಾತ ಮತ ಬೇದ ಹಾಗೂ ಜನರಲ್ಲಿ ಧರ್ಮ ಧರ್ಮಗಳಲ್ಲಿ ಎತ್ತುಕಟ್ಟುವ ಕೆಲಸ ಈ ಸರ್ಕಾರ ಮಾಡುತ್ತಿದೆ.

ಧರ್ಮ ಆಧಾರಿತ ಮೀಸಲಾತಿ ಕೊಡಲಾಗದು ಎಂದು ಸಂವಿಧಾನ ಸ್ಪಷ್ಟವಾಗಿ ತಿಳಿಸಿದೆ. ಈ ಸಂಬಂಧ ಸುಪ್ರೀಂ ಕೋರ್ಟ ಸೇರಿ ವಿವಿಧ ಕೋರ್ಟಗಳು ತೀರ್ಪು ಕೊಟ್ಟಿವೆ. ಇದು ಸಂವಿಧಾನ ವಿರೋಧಿ ಎಂಬುದು ಗೊತ್ತಿದ್ದರೂ ನಾಡಿನ ಹಿಂದೂಗಳ ಮೇಲೆ ದೌರ್ಜನ್ಯ-ಅವಮಾನ ಮಾಡುವ ನೀರ್ಧಾರ ಖಂಡಿಸಿ ಅಕ್ಷಮ್ಯ ಅಪರಾಧ ಎಂದು ತಿಳಿಸಲು ಬಯಸುತ್ತೇವೆ. ಸರ್ಕಾರವು ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕೆಂದು ಆಗ್ರಹಿಸಲು ಬಯಸುತ್ತೇವೆ.

ರಾಜ್ಯ ಸರ್ಕಾರವು ಬಜೆಟ್‌ನಲ್ಲಿ SC-ST ಸಮುದಾಯಗಳಿಗೆ ಮೀಸಲಿಟ್ಟ SCSP-TSP ಹಣವನ್ನು ಅನ್ಯ ಉದ್ದೇಶಕ್ಕೆ ಅದರಲ್ಲೂ ಪ್ರಮುಖವಾಗಿ ಗ್ರಾರಂಟಿ ಸಂಬಂಧ ಬಳಸುತ್ತಿದೆ. ಇದು ಅತ್ಯಂತ ಖಂಡನಾರ್ಹ. ಸುಮಾರು 39 ಸಾವಿರ ಕೋಟಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಿದ್ದರಿಂದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ (SC-ST) ಸಮುದಾಯಗಳ ಜನರಿಗೆ ತೀವ್ರ ಅನ್ಯಾಯವಾಗಿದೆ.

ಮುಂದೆ ಈ ಮೊತ್ತವನ್ನು ಅನ್ಯ ಉದ್ದೇಶಗಳಿಗೆ ಬಳಸಬಾರದು ಮತ್ತು ಈಗಾಗಲೇ ಬಳಸಿದ ಮೊತ್ತವನ್ನು ಮತ್ತೆ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಸಬೇಕೆಂದು ಆಗ್ರಹಿಸುತ್ತೇವೆ. ಪರಿಶೀಷ್ಟ ಸಮುದಾಯಕ್ಕೆ ಭೂಮಿ ಖರೀದಿ, ಗಂಗಾ ಕಲ್ಯಾಣ ಯೋಜನೆ, ವಿಧಾರ್ಥಿಗಳ ಶಿಕ್ಷಣದಂಥ ಕಾರ್ಯಕ್ರಮಗಳಿಗೆ ಇದನ್ನು ಬಳಸಬೇಕು ಎಂದು ಪ್ರತಿಭಟನೆ ಮೂಲಕ ಮನವಿ ಸಲ್ಲಿಸಿದರು

About The Author