ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕ ಕಾನೂನು ಸೇವೆಗಳ ಸಮಿತಿ ಸವದತ್ತಿ ಹಾಗೂ ವಕೀಲರ ಸಂಘ ಸವದತ್ತಿ ಮತ್ತು ಮತ್ತು ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿ ಇವರ ಸಂಯುಕ್ತ ಆಶ್ರಯದಲ್ಲಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಂವಿಧಾನ ಬದ್ದವಾಗಿ ಎಲ್ಲ ಭಾರತೀಯ ನಾಗರಿಕರಿಗೆ ಇರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಬಗ್ಗೆ ಅರಿವು ಮತ್ತು ಖಾಯಂ ಜನತಾ ನ್ಯಾಯಾಲಯಗಳ ಬಗ್ಗೆ ತಿಳಿಸುವ ಜಾಗೃತಿ ಮತ್ತು ಉಚಿತ ಕಾನೂನು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ಸಿದ್ದರಾಮ ಹಿರಿಯ ಶ್ರೇಣಿ ಸಿವ್ಹಿಲ್ ನ್ಯಾಯಾಧೀಶರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಪ್ರಚಾರ್ಯರಾದ ಆರ್ ಎಫ್ ಮಾಘಿ ವಹಿಸಿದ್ದರು. ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜೆ ಬಿ ಮುನವಳ್ಳಿ ಉಪಾಧ್ಯಕ್ಷರಾದ ಶ್ರೀ ಎಂ ಎಸ್ ಹುಬ್ಬಳ್ಳಿ ವಕೀಲರು, ಮಹಿಳಾ ಪ್ರತಿನಿಧಿಯಾದ ಶ್ರೀಮತಿ ಸಾವಿತ್ರಿ ಶಿಭಾರಗಟ್ಟಿ ಮತ್ತು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳು ಮತ್ತು ಸರ್ಕಾರಿ ಆದರ್ಶ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಸುರೇಶ ಎಸ್ ಕಾಳಪ್ಪನವರ ಆಗಮಿಸಿದ್ದರು. ವಿಶೇಷ ಉಪನ್ಯಾಸಕರಾಗಿ ಕುಮಾರಿ ಜೆ ಎಸ್ ಕಾಂಗ್ರೇಶಕೊಪ್ಪ ಆಗಮಿಸಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸವದತ್ತಿಯ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಶ್ರೀ ಸಿದ್ದರಾಮ ಸಾಹೇಬರು ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ದೃಷ್ಟಾಂತಗಳ ಮೂಲಕ ವಿಶೇಷ ಉಪನ್ಯಾಸವನ್ನು ನೀಡಿದರು. ಜೊತೆಗೆ ಶಾಲೆಯ ಮಕ್ಕಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ, ಬಿಸಿಊಟ ಕುಡಿಯುವ ಶುದ್ಧ ನೀರು ಮತ್ತು ವಿದ್ಯಾರ್ಥಿಗಳ ಆರೋಗ್ಯದ ಕುರಿತು ವಿದ್ಯಾರ್ಥಿಗಳಿಗೆ ಖುದ್ದಾಗಿ ವಿಚಾರಿಸಿದರು. ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಒಳ್ಳೆಯ ನಾಗರಿಕ ಮೌಲ್ಯಗಳು ರೂಪಿಸಿಕೊಳ್ಳಲು ಸಲಹೆ ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಹೆಮ್ಮೆಯ ಶಿಕ್ಷಕರಾದ ಶ್ರೀ ಐ ಬಿ ನೈಸರ್ಗಿ ಸರ್ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಸುಕನ್ಯಾ ಬೀಳಗಿ ಮತ್ತು ಶಾಲೆಯ ಎಲ್ಲ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಯಡ್ರಾಂವಿ ಸರ್ಕಾರಿ ಆದರ್ಶ ಶಾಲೆಯಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ.

WhatsApp Group
Join Now