Farmers: ರಾಜ್ಯದ ರೈತರಿಗೆ ಸರ್ಕಾರದಿಂದ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ (farmers) ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದು ಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶವನ್ನು ಹೊರಡಿಸಿದೆ.

ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ.
* 2 ಎಕರೆ ವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ)
* 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ), 400 ರೂ. (ಗ್ರಾಮೀಣ)
ಜಮೀನು ಹದ್ದುಬಸ್ತು
* 2 ಎಕರೆವರೆಗೆ 2,000 (ನಗರ), 500 (ಗ್ರಾಮೀಣ)
* 2 ಎಕರೆ ನಂತರ ಪ್ರತಿ ಎಕರೆಗೆ 400 ರೂ. (ನಗರ), 300 ರೂ. (ಗ್ರಾಮೀಣ)
ಸರ್ಕಾರದ ಆದೇಶಗಳಲ್ಲಿ ಅರ್ಜಿ ಶುಲ್ಕವನ್ನು (farmers) ನಿರ್ದಿಷ್ಟವಾಗಿ ಪಹಣಿ ಕಾಲಂ-3 ಅಥವಾ ಕಾಲಂ-9 ವಿಸ್ತೀರ್ಣಕ್ಕೆ ಅನುಗುಣವಾಗಿ ಪಾವತಿಸಿಕೊಳ್ಳಬೇಕೆ ಎಂಬುದರ ಬಗ್ಗೆ ಸ್ಪಷ್ಟ ನಿರ್ದೇಶನ ಇಲ್ಲದ ಕಾರಣ ಸ್ವಾವಲಂಬಿ ಯೋಜನೆಯಡಿಯಲ್ಲಿ ಸಲ್ಲಿಸುವ ಅರ್ಜಿಗಳಿಗೆ ಪಹಣಿಯ 900-3 ರಲ್ಲಿನ ಪೂರ್ಣ ವಿಸ್ತೀರ್ಣಕ್ಕೆ ಅರ್ಜಿ ಶುಲ್ಕವನ್ನು ಲೆಕ್ಕ ಪಾವತಿಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಪ್ರಸ್ತುತ ಪೋಡಿ ಮುಕ್ತ ಗ್ರಾಮ ಅಭಿಯಾನ ಯೋಜನೆಯಡಿಯಲ್ಲಿ (farmers) ಬಹುಮಾಲೀಕತ್ವ ಪಹಣಿಯಲ್ಲಿರುವ ಹಕ್ಕುದಾರರಿಗೆ ಶುಲ್ಕ ರಹಿತವಾಗಿ ಪೋಡಿ ಮಾಡಿಕೊಡುವ ಯೋಜನೆ ಜಾರಿಯಲ್ಲಿರುತ್ತದೆ. ಇದಲ್ಲದೆ ಅಲಿನೇಷನ್, ದರಖಾಸ್ತು ಪೋಡಿಗೆ ಸಂಬಂಧಿಸಿದಂತೆ ಮಂಜೂರಿ ಸಮಯದಲ್ಲಿಯೇ ಅರ್ಜಿದಾರರಿಂದ ಪೋಡಿ ಶುಲ್ಕ (farmers) ಭರಿಸಿಕೊಳ್ಳಲಾಗುತ್ತಿದೆ.