ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ ಯಡ್ರಾಂವಿಯಲ್ಲಿ ಶುಕ್ರವಾರ ರಂದು 79 ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು ಶಾಲೆಯ ಎಲ್ಲ ವಿದ್ಯಾರ್ಥಿ/ನಿಯರು ಅತಿ ವಿಜೃಂಭಣೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸ್ವಾತಂತ್ರೋತ್ಸದ ನಿಮಿತ್ಯ ಹಮ್ಮಿಕೊಳ್ಳಲಾಗಿತ್ತು.

WhatsApp Group
Join Now
ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದ ಹಾಗೂ ಎಸ್ ಡಿ ಎಂ ಸಿ ಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು. ಧ್ವಜಾರೋಹಣವನ್ನು ಆ ಶಾಲೆಯ ಎಸ್ ಡಿ ಎಂ ಸಿ ಯ ಅಧ್ಯಕ್ಷರಾದ ಶ್ರೀ ಸುರೇಶ ಎಸ್ ಕಾಳಪ್ಪನವರ ನೇರವೇರಿಸಿ, ಶಾಲೆಯ ಮಕ್ಕಳಿಗೆ ಸ್ವಾತಂತ್ರೋತ್ಸವದ ಮಹತ್ವದ ಬಗ್ಗೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗಣ್ಯಮಾನ್ಯರ ತ್ಯಾಗ ಬಲಿದಾನಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ ದೇಶಪ್ರೇಮದ ಕುರಿತು ತಿಳಿಸಿ ಅವರಂತೆ ದೇಶಪ್ರೇಮವನ್ನು ಚಿಕ್ಕ ವಯಸ್ಸಿನಲ್ಲೇ ಬೆಳೆಸಿಕೊಳ್ಳಬೇಕೆಂದು ಎಲ್ಲರೂ ವಿವಿಧತೆಯಲ್ಲಿ ಏಕತೆಯ ಭಾವಹೊಂದಿರಬೇಕೆಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಆರ್ ಎಫ್ ಮಾಘಿಯವರು ವಹಿಸಿಕೊಂಡಿದ್ದರು. ಎಂ ಆರ್ ಮುದ್ದಣ್ಣವರ ಕಾರ್ಯಕ್ರಮವನ್ನು ನಿರೂಪಿಸಿದರು.