ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ

WhatsApp Group Join Now

ದುರಹಂಕಾರಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ರಾಮದುರ್ಗ ತಾಲೂಕಿನ ಸುರೇಬಾನ ಹಾಗೂ ಬಟಕುರ್ಕಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಪರ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಮತಯಾಚನೆ ಮಾಡಿದ ಅವರು, ಕಳೆದ ೧೦ ವರ್ಷಗಳಿಂದ ಉತ್ತಮ ಆಡಳಿತ ನಡೆಸಿದ ಮೋದಿ ಅವರನ್ನು ಕೆಳಗೆ ಇಳಿಸಲು ಕಾಂಗ್ರೆಸ್ ಪಕ್ಷ ಸುಳ್ಳು ಗ್ಯಾರಂಟಿ ಕೊಡುತ್ತಿದ್ದಾರೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಸೆದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಭು ಶ್ರೀರಾಮನಿಗೆ ಆಶ್ರಯ ನೀಡಿದ ಪುಣ್ಯ ಭೂಮಿ ಶಬರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ. ಇದು ನಮ್ಮ ಗ್ಯಾರಂಟಿ. ಶಬರಿ ಕ್ಷೇತ್ರಕ್ಕೆ ದೇಶ ವಿದೇಶದ ಜನರು ಇತ್ತ ಬರುವಂತೆ ಮಾಡಲು ಕಳಂಕ ರಹಿತ ಶೆಟ್ಟರ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಮಾಜಿ ಸಿಎಂ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರು ಮಾತನಾಡಿ, ಬಹಳ ದಿನಗಳಿಂದ ನೆನೆಗುದಿಗೆ ಬಿದ್ದ ಕಳಸಾ ಬಂಡೂರಿ ನಾಲಾ ಸಮಸ್ಯೆಗೆ ಮುಕ್ತಿ ನೀಡಿ, ಶೀಘ್ರದಲ್ಲೆ ಮಲಪ್ರಭಾ ನದಿಗೆ ನೀರು ಹರಿಸುವುದಾಗಿ ಹೇಳಿದರು. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಮಾಡಲು ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದ ಅವರು, ನೇಕಾರ ಸಮುದಾಯ ಜನರು ಈಭಾಗದಲ್ಲಿ ಹೆಚ್ಚಾಗಿ ಇರುವುದರಿಂದ ಜವಳಿ ಪಾರ್ಕ್ ಸ್ಥಾಪನೆ ಸೇರಿದಂತೆ ಕಳಸಾ ಬಂಡೂರಿ ಕಾಮಗಾರಿಗೆ ಚಾಲನೆ ನೀಡುವುದಾಗಿ ಭರವಸೆ ನೀಡಿದರು.
ರಾಮದುರ್ಗ ತಾಲೂಕನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ಮಾಡಿದ್ದು, ಐಟಿ ಕಂಪನಿ ಸೇರಿದಂತೆ ವಿವಿಧ ಕಂಪನಿಗಳನ್ನು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತರುವ ಮೂಲಕ ಯುವಕರಿಗೆ ಉದ್ಯೋಗ ಸೃಷ್ಠಿಸಲು ಹಗಲಿರುಳು ಶ್ರಮಿಸುವುದಾಗಿ ಹೇಳಿದರು.
ಮಾಜಿ ಸಚಿವ ಶಂಕರ ಮಾಟೀಲ ಮುನೇನಕೊಪ್ಪ ಅವರು ಮಾತನಾಡಿ, ಪಿಎಂ ಕಿಸಾನ್ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಕೇಂದ್ರದ ಬಿಜೆಪಿ ಸರಕಾರ ರೈತರ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಿ ರೈತ ಪರ ಸರಕಾರ ಎನಿಸಿಕೊಂಡಿದೆ. ನಾನು ಹಿಂದೆ ಜವಳಿ ಮಂತ್ರಿ ಇದ್ದ ವೇಳೆ ನೇಕಾರರ ಹಿತ ಕಾಯಲು ನೇಕಾರ ಸಮ್ಮಾನ ಯೋಜನೆ ಮತ್ತು ನೇಕಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತಂದಿದ್ದೇನೆ ಎಂದರು.
ಈ ವೇಳೆ ಎಂ.ಡಿ. ಲಕ್ಷಿö್ಮÃನಾರಾಯಣ, ವಿಧಾನ ಪರಿಷತ್‌ನ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ನೇಕಾರ ಪ್ರಕೋಷ್ಟದ ರಾಜ್ಯ ಸಂಚಾಲಕ ಬಿ.ಎಸ್. ಸೋಮಶೇಖರ, ಮುಖಂಡರಾದ ರಮೇಶ ದೇಶಪಾಂಡೆ, ಪಿ.ಎಫ್. ಪಾಟೀಲ, ಮಾರುತಿ ಕೊಪ್ಪದ, ಧನಲಕ್ಷಿö್ಮÃ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ರಾಜೇಶ ಬೀಳಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About The Author