ಸವದತ್ತಿ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು.

WhatsApp Group Join Now

ಸಮಾಜದ ವಾಸ್ತುಶಿಲ್ಪಿಗಳು ಮತ್ತು ಭವಿಷ್ಯದ ನಾಯಕರನ್ನು ರೂಪಿಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಶಾಸಕ ವಿಶ್ವಾಸ್ ವಸಂತ ವೈದ್ಯ ಹೇಳಿದರು.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿಕ್ಕಂ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಜರಗಿದ ಶಿಕ್ಷಕರ ದಿನಾಚರಣೆ, ಹಾಗೂ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ಅವರು ಜ್ಯೋತಿ ಬೆಳಗಿಸೋದರ ಮೂಲಕ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಜ್ಞಾನ, ಸ್ಫೂರ್ತಿ, ಮಾರ್ಗದರ್ಶನ ಮತ್ತು ಬೆಂಬಲವನ್ನು ನೀಡುವ ಶಿಕ್ಷಕರ ಸೇವೆ ಅಪಾರ. ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ತಾಲೂಕಿನ ದಡೇರಕೊಪ್ಪ, ಕುರುಬರ ದಡ್ಡಿ ಪ್ರೌಢಶಾಲೆಗಳನ್ನು ಮೇಲ್ದರ್ಜೆಗೇರಿಸುವಲ್ಲಿ ಸಫಲರಾಗಿದ್ದೇವೆ. ಮಬನೂರ, ಅರಟಗಲ್ ನಲ್ಲಿ ಪಿಯುಸಿ ಕಾಲೇಜು ಶೀಘ್ರದಲ್ಲಿ ಪ್ರಾರಂಭ. ಲೋಕೋಪಯೋಗಿ ಇಲಾಖೆ ಯಿಂದ 3 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ದುರಸ್ತಿ ಸೇರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಸಕರ ಅನುದಾನದಲ್ಲಿ ಸಾಕಷ್ಟು ಯೋಜನೆ ರೂಪಿಸಲಾಗಿದೆ ಎಂದರು.

ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರಲ್ಲಿನ ಪ್ರತಿಭೆಯನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದರು.

ರಾಘವೇಂದ್ರ ಸರದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು, ನಿವೃತ್ತ ಶಿಕ್ಷಕರನ್ನು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

ಈ ವೇಳೆ ತಾಲೂಕು ಪಂಚಾಯತ ಇಒ ಆನಂದ ಬಡಕುಂದ್ರಿ, ರಾಮದುರ್ಗ ಡಿವೈಎಸ್ ಪಿ ಚಿದಂಬರ ಮಡಿವಾಳರ, ಪಿ ಐ ಧರ್ಮಾಕರ ಧರ್ಮಟ್ಟಿ, ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚಣ್ಣವರ, ಅಶ್ವಥ್ ವೈದ್ಯ, ಸಮಾಜ ಕಲ್ಯಾಣಾಧಿಕಾರಿ ಆರ್ ಆರ್ ಕುಲಕರ್ಣಿ, ಎಪಿಎಂಸಿ ಅಧ್ಯಕ್ಷ ಚಂದ್ರಶೇಖರ ಪೂಜೇರ, ನಿವೃತ್ತ ಶಿಕ್ಷಕಿ ಭಾಗೀರಥಿ ಹಿರೇಮಠ, ಸಿಡಿಪಿಒ ಅಮೃತ ಸಾಣಿಕೊಪ್ಪ, ಗ್ಯಾರೆಂಟಿ ಯೋಜನೆ ತಾಲೂಕಾಧ್ಯಕ್ಷ ಶಿವಕುಮಾರ್ ರಾಠೋಡ್, ಹಿಂದುಳಿದ ಕಲ್ಯಾಣ ಇಲಾಖೆ ಅಧಿಕಾರಿ ಆರ್ ಎಲ್ ಕದಂ, ಕ್ಷೇತ್ರ ಸಮನ್ವಯಧಿಕಾರಿ ಬಿ
ಎನ್ ಬ್ಯಾಳಿ, ಅಕ್ಷರ ದಾಸೋಹ ಅಧಿಕಾರಿ ಮೈತ್ರಾದೇವಿ ವಸ್ತ್ರದ, ಪುರಸಭೆ ಸದಸ್ಯರು, ಶಿಕ್ಷಕರು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

About The Author