ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಖಬರಸ್ಥಾನದ ಹತ್ತಿರ ಇರುವ ಹಳ್ಳಕ್ಕೆ ಬ್ರೀಡ್ಜ್ ಕಂ. ಬ್ಯಾರೇಜ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲೂಕಿನ ಸಮಗ್ರ ಅಭಿವೃದ್ದಿ ಪಡೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಹಂತ ಹಂತವಾಗಿ ಸರಕಾರದಿಂದ ಅನುದಾನ ಮಂಜೂರಾದ ತಕ್ಷಣ ಎಲ್ಲಾ ಕಾಮಗಾರಿ ಕೈಗೊಳ್ಳಲು ಕ್ರಮ ವಹಿಸಲಾಗುವದು. ಸರಕಾರದಿಂದ ದೊರೆತ ಅನುದಾನ ಸದ್ಭಳಕೆಯಾಗಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಜನತೆ ಗುತ್ತಿಗೆದಾರರಿಗೆ ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಹಣಮಪ್ಪ ಸಣದಿ, ಮಾಜಿ ಗ್ರಾ.ಪಂ ಅಧ್ಯಕ್ಷ ಇಮಾಮಸಾಬ ಬೇಪಾರಿ, ಸದಸ್ಯರಾದ ಫಕ್ರುಸಾಬ ಬೇಪಾರಿ, ಮುಖಂಡರು ಹಾಗೂ ಗುತ್ತಿಗೆದಾರರಾದ ಸತೀಶ ಜಿನಗಾ, ಪೀರು ತಳವಾರ, ಶಂಕ್ರಪ್ಪ ಕಂಟಿ, ಸಣ್ಣ ನೀರಾವರಿ ಇಲಾಖೆಯ ಎಇಇ ಲಕ್ಷ್ಮಣ್ ಬಂಡಿವಡ್ಡರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.