ಹುಬ್ಬಳ್ಳಿಯಿಂದ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್ ವ್ಯವಸ್ಥೆ

WhatsApp Group Join Now

ಹುಣ್ಣಿಮೆ ಹಾಗೂ ಅಮಾವಾಸ್ಯೆಯ ದಿನಗಳಲ್ಲಿ ಹುಬ್ಬಳ್ಳಿ ನಗರದಿಂದ ಬೆಳಗಾವಿ ಜಿಲ್ಲೆ ಸವದತ್ತಿಯ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ವಾಯುವ್ಯ ಸಾರಿಗೆ ಸಂಸ್ಥೆಯ ವತಿಯಿಂದ ವಿಶೇಷ ಬಸ್‌ಗಳನ್ನು ಓಡಿಸುತ್ತಿರುವುದಾಗಿ ಸಾರಿಗೆ ಸಂಸ್ಥೆ ತಿಳಿಸಿದೆ.
ಸವದತ್ತಿಯ ಯಲ್ಲಮ್ಮನ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಡಿಸೆಂಬರ್ 15 ರಂದು ಭಾನುವಾರ ಹುಣ್ಣಿಮೆಯಂದು ಮತ್ತು ಬರುವ ಅಮಾವಾಸ್ಯೆಯ ವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಈ ಬಗ್ಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.

ಕಳೆದ ಶೀಗಿ ಹುಣ್ಣಿಮೆ, ದೀಪಾವಳಿ ಅಮವಾಸೆ ಹಾಗೂ ನಂತರದ ಹುಣ್ಣಿಮೆಗಳ ಸಮಯದಲ್ಲಿ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಕಲ್ಪಿಸಲಾಗಿದ್ದ ವಿಶೇಷ ನೇರ ಬಸ್ ಗಳಿಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ ಈ ವಿಶೇಷ ನೇರ ಬಸ್‌ಗಳಿಂದ ಸಾವಿರಾರು ಭಕ್ತಾದಿಗಳಿಗೆ ಬಹಳಷ್ಟು ಅನುಕೂಲವಾಗಿದೆ.

ಬರುವ ಹುಣ್ಣಿಮೆಯ ದಿನ, ಮಂಗಳವಾರ ಹಾಗೂ ಶುಕ್ರವಾರ ದಂದು ಸಹ ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರಿಂದ ಕೋರಿಕೆ ಬಂದಿರುತ್ತದೆ. ಹೀಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಗೆ ಮುಂದಾಗಿದೆ.

ಡಿಸೆಂಬರ್ 15 ರಂದು ರವಿವಾರ ಹಾಗೂ ಮುಂದಿನ ಅಮವಾಸೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಗಳಂದು ಡಿಸೆಂಬರ್ 17, 20, 24 ಹಾಗೂ 27ರಂದು ಹುಬ್ಬಳ್ಳಿಯಿಂದ ಯಲ್ಲಮ್ಮನ ಗುಡ್ಡಕ್ಕೆ ವಿಶೇಷ ನೇರ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಬಸ್ಸುಗಳು ಹುಬ್ಬಳ್ಳಿ ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ಈ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮುಂದುವರೆಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿ ಕಾರಿ ಎಚ್. ರಾಮನಗೌಡ ಅವರು ತಿಳಿಸಿದ್ದಾರೆ.

About The Author