WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ
ಕೊರಕೊಪ್ಪ ಗ್ರಾಮದಲ್ಲಿ, 2024-2025ನೇ ಸಾಲಿನ ಕಾಲೋನಿ ಅಭಿವೃದ್ಧಿ/ಪ್ರಗತಿ ಕಾಲೋನಿ ಯೋಜನೆಯಡಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 18 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ್ ವಸಂತ ವೈದ್ಯ ನೆರವೇರಿಸಿ ಅವರ ಮಾತನಾಡಿದರು.
ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಉತ್ತಮ ರಸ್ತೆ ಸಂಪರ್ಕ ಒದಗಿಸುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ. ಈ ಹೊಸ ರಸ್ತೆಯಿಂದಾಗಿ ಸ್ಥಳೀಯ ನಿವಾಸಿಗಳಿಗೆ ಓಡಾಟ ಸುಲಭವಾಗಲಿದ್ದು, ಕಾಲೋನಿಯ ಒಟ್ಟಾರೆ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ಕಾಮಗಾರಿಯು ಸರ್ಕಾರದ ಅನುದಾನದಡಿ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಪೂರ್ಣಗೊಲಿಸಲು ಗುತ್ತಿಗೆದಾರರಿಗೆ ತಿಳಿಸಿದೆನು ಎಂದು ಹೇಳಿದರು.
ಈ ವೇಳೆ ಕೋರಕೊಪ್ಪ ಗ್ರಾಮದ ಗ್ರಾಮಸ್ಥರು ಪೋಲ್ಗೊಂಡಿದ್ದರು.