3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

WhatsApp Group Join Now

ಕಾಮಗಾರಿಯ ಕಾರ್ಯಾದೇಶ ನೀಡಲು ವಿದ್ಯುತ್‌ ಗುತ್ತಿಗೆದಾರರೊಬ್ಬರಿಂದ 3.5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಕಾರ್ಯಪಾಲಕ ಎಂಜಿನಿಯರ್‌ ತಿಮ್ಮರಾಯಪ್ಪ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ತಿಮ್ಮರಾಯಪ್ಪ ಕಾಮಗಾರಿ ಮೊತ್ತದ ಶೇ 10ರಷ್ಟು ಹಣವನ್ನು ಕಮೀಷನ್‌ ನೀಡಬೇಕು ಎಂದು ಬೇಡಿಕೆಯೊಡ್ಡಿದ್ದರು. ಈ ಕುರಿತು ಹೊಳಲ್ಕೆರೆ ತಾಲ್ಲೂಕು ದುಮ್ಮಿ ಗ್ರಾಮದ ವಿದ್ಯುತ್‌ ಗುತ್ತಿಗೆದಾರ ಎಸ್‌.ಆರ್‌.ಸಂಜಯ್‌ ಬುಧವಾರ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಗುರುವಾರ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಲಂಚದ ಹಣವನ್ನು ಜಪ್ತಿ ಮಾಡಿದ್ದಾರೆ

About The Author