70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

WhatsApp Group Join Now

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು.

ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ಬೆನ್ನಲ್ಲೇ ಮಹಿಳಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಜಗದೇವಿ ಮತ್ತು ತನಿಖಾಅಧಿಕಾರಿಗೆ ಸಹಾಯ ಮಾಡುತ್ತಿದ್ದ ಕಾನ್‌ಸ್ಟೆಬಲ್ ಮಂಜುನಾಥ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

About The Author