WhatsApp Group
Join Now
ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ತಾಲೂಕಾ ನ್ಯಾಯಾಲಯಗಳ ಆವರಣದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರದಾ,ನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ದರಾಮ ಅವರು ಧ್ಯಜಾರೋಹಣ ನೆರವೇರಿಸಿದರು.

ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಕಾರ್ಯದರ್ಶಿಯಾದ ಸಿದ್ರಾಮ ರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕರಾದ ಎ.ಎ.ನೇಸರಿಕರ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ, ಮಹಿಳಾ ಪ್ರತಿನಿಧಿ ನ್ಯಾಯವಾದಿ ಎಸ್.ವಾಯ್.ಶಿಬಾರಗಟ್ಟಿ, ಹಾಗೂ ನ್ಯಾಯವಾದಿಗಳ ಸಂಘದ ಸರ್ವ ಸದಸ್ಯರು, ನ್ಯಾಯಾಲಯದ ಸಿಬ್ಬಂಧಿಯವರು, ಇತರರು ಉಪಸ್ಥಿತರಿದ್ದರು.