ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
ಬೆಳಗಾವಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಟ್ಟಡವನ್ನು ಶುಕ್ರವಾರ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಕ್ಕೆ ಆದಾಯ ತರುವ ಪ್ರಮುಖ ಇಲಾಖೆಗಳಲ್ಲಿ ಸಾರಿಗೆ ಇಲಾಖೆ ಕೂಡ ಒಂದಾಗಿದೆ. ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದು, ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಸಿಬ್ಬಂದಿಗಳು ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿಗಳ ಕೊರತೆ ಕಡಿಮೆಯಾಗಲಿದೆ ಎಂದರು….
