ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ
ಬೆಳಗಾವಿ. ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ವಾರ್ತಾ ಭವನದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವರನಟ ಡಾ. ರಾಜಕುಮಾರ್ ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ ರಾಜಕುಮಾರ್ ಅವರ ಚಲನಚಿತ್ರಗಳನ್ನು ನೋಡುವುದರ ಮೂಲಕ ನಾನು…
