Prashanth Angadi

ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಇವರಿಂದ ವಿವಿಧೆಡೆ ದಾಳಿ; ನಾಲ್ವರು ಬಾಲಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಪ್ಯಾನ್-ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಸಿರುಗುಪ್ಪ ಮತ್ತು ಸಂಡೂರು ಪಟ್ಟಣಗಳಲ್ಲಿ ದಾಳಿ ನಡೆಸಿ 04 ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ತಿಳಿಸಿದ್ದಾರೆ. ಸಿರುಗುಪ್ಪ ಪಟ್ಟಣದ ದೇಶನೂರು ರಸ್ತೆ, ಆದೋನಿ ರಸ್ತೆ, ಬಳ್ಳಾರಿ ರಸ್ತೆ ಮತ್ತು ಸಂಡೂರು ಪಟ್ಟಣದ ಕೂಡ್ಲಿಗಿ ರಸ್ತೆ, ಹೊಸಪೇಟೆ ರಸ್ತೆ ಹಾಗೂ ಎ.ಪಿ.ಎಂ.ಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್…

Read More

ವಿಎಸ್‍ಕೆವಿವಿ: ‘ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರ’

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗ, ಕರ್ನಾಟಕ ವಾಲಿಬಾಲ್ ಸಂಸ್ಥೆ ಬೆಂಗಳೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಸಹಯೋಗದೊಂದಿಗೆ ವಿವಿಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ರಾಜ್ಯಮಟ್ಟದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆ ಹಾಗೂ ಹೊಸ ನಿಯಮಗಳ ಕುರಿತು ಕಾರ್ಯಗಾರವನ್ನು ಡಾ.ಹೆಚ್.ಡಿ.ಕೃಷ್ಣಪ್ಪ ಅವರು ಸಸಿಗೆ ನೀರ್ ಉಣಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡೆಗಳು ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಆಟಗಾರರನ್ನು ನಿರ್ಮಾಣ ಮಾಡುತ್ತವೆ. ಪರಿಶ್ರಮದ ಮೂಲಕ ತಂಡದ ಮೌಲ್ಯವನ್ನು ಹೆಚ್ಚಿಸುತ್ತವೆ. ಟೋಕಿಯೊನ ಒಲಂಪಿಕ್‍ನಿಂದ…

Read More

ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು ನಿರಂತರವಾಗಿರಬೇಕು. ತಾಂತ್ರಿಕ ಯುಗದಲ್ಲಿ ಪ್ರತಿಕ್ಷಣವೂ ಅಮೂಲ್ಯವಾಗಿದ್ದು, ಸಾರ್ವಜನಿಕರಿಗೆ ಪಾರದರ್ಶಕ ಹಾಗೂ ನ್ಯಾಯಬದ್ಧವಾದ ಆಡಳಿತ ದೊರಕಬೇಕು.ಈ ನಿಟ್ಟಿನಲ್ಲಿ ಸರಕಾರ ಹೆಜ್ಜೆ ಹಾಕುತ್ತಿದೆ.ಸಾರ್ವಜನಿಕರ ಕೆಲಸಗಳನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮಾತನಾಡಿ ಕಂದಾಯ…

Read More

ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಇಒ ಪ್ರವೀಣಕುಮಾರ ಸಾಲಿ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಳೆತೊರಗಲ್ಲ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಗನೂರ ಗ್ರಾಮದಲ್ಲಿ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಗ್ರಾಮ ಆರೋಗ್ಯ ಅಭಿಯಾನ ಕಾರ್ಯಕ್ರಮಕ್ಕೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಚಾಲನೆ ನೀಡಿ ಅವರು ಮಾತನಾಡಿದರು.ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರಿಗಾಗಿ ಇಲಾಖೆಯಿಂದ ಸಿಗುವ ಅನುಕೂಲ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವದು. ಕೂಲಿ ಕಾರ್ಮಿಕರು ಸರಕಾರದ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಹೇಳಿದರು.ಸಹಾಯಕ ನಿರ್ದೇಶಕ ಸಂಗನಗೌಡ ಹಂದ್ರಾಳ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಕೂಲಿಕಾರ್ಮೀಕರು…

Read More

ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಟಕೋಳ ಎಸ್.ಜಿ.ಟಿ ಕಿರಿಯ ಮಹಾವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮದಲ್ಲಿ ಪಿಎಸ್‌ಐ ಬಸವರಾಜ ಕೊಣ್ಣುರೆ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಟಕೋಳ ಎಸ್.ಜಿ.ಟಿ ಕಿರಿಯ ಮಹಾವಿದ್ಯಾಲಯದಲ್ಲಿ ಜರುಗಿದ ಮಾದಕ ವ್ಯಸನದ ದುಷ್ಪರಿಣಾಮದ ಜಾಗೃತಿ ಕಾರ್ಯಕ್ರಮದಲ್ಲಿ ಪಿಎಸ್‌ಐ ಬಸವರಾಜ ಕೊಣ್ಣುರೆ ಪಾಲ್ಗೊಂಡು ಮಾತನಾಡಿದ ಅವರು, ಮದ್ಯಪಾನ ಧೂಮಪಾನ ಡ್ರಗ್ಸ ಇನ್ನೂ ಅನೇಕ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಸಾಮಾಜಿಕವಾಗಿ ನೀವು ನಿರ್ಲಕ್ಷಕ್ಕೆ ಒಳಗಾಗುತ್ತಿರಿ. ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ಬಲಿಯಾಗದೆ ನಿಮ್ಮ ತಂದೆ ತಾಯಿಗಳಿಗೆ ಕಲಿಸಿದ ಗುರುಗಳಿಗೆ ದೇಶಕ್ಕೆ ಒಳ್ಳೆಯ ಶ್ರೇಷ್ಠ ವ್ಯಕ್ತಿಯಾಗಬೇಕು. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ ಅಭ್ಯಾಸದ ಕಡೆಗೆ ಹೆಚ್ಚಿನ ಗಮನಕೊಡಿ ಎಂದರು.ಇದೇ…

Read More

ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾದಾಗ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ವಿನಾಕಾರಣ ವಿಳಂಬ ಮಾಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ‌ ವಿರುದ್ದ ಕ್ರಮ‌ ಜರುಗಿಸಲಾಗುವುದು ಜಿಲ್ಲಾಧಿಕಾರಿ‌ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಅನುಸೂಚಿತ ಜಾತಿ/ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ/ಪಂಗಡದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು ಜಾರಿಯಲ್ಲಿದ್ದು, ಸದರಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಪರಿಶಿಷ್ಟ ಜಾತಿ‌ ಮತ್ತು ಪರಿಶಿಷ್ಟ ವರ್ಗದ ಜನರಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ನೀಡುವಲ್ಲಿ ವಿಳಂಬ ಧೋರಣೆ‌ ಅನುಸರಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗೋಕಾಕಿನ‌ ಜಿ.ಎಸ್.ಎಸ್. ಪದವಿ ಪೂರ್ವ ಕಾಲೇಜಿನ‌ ಪ್ರಭಾರಿ ಪ್ರಾಚಾರ್ಯರ ನೇಮಕಾತಿ ಆದೇಶವನ್ನು…

Read More

ಬಳ್ಳಾರಿ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ

ಬಳ್ಳಾರಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿನ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಜನತಾ ದರ್ಶನ’ ಕಾರ್ಯಕ್ರಮವನ್ನು ಸಸಿಗೆ ನೀರು ಉಣಿಸುವುದರ ಮೂಲಕ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದ ನಿರ್ದೇಶನದಂತೆ ಜನತಾ ದರ್ಶನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದ್ದು, ಸಮಸ್ಯೆಗಳನ್ನು ಆಲಿಸಿ, ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಸಮಸ್ಯೆಗಳಿರುವ ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ,…

Read More

ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ

ಬಳ್ಳಾರಿ ಪಟ್ಟಣದ ಇನ್ಸ್‍ಟ್ಯೂಟ್ ಆಪ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಕಾಲೇಜು ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮ ಸಸಿಗೆ ನೀರು ಉಣಿಸುವುದರ ಮೂಲಕ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಹೊಸಮನೆ ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳು ವಿವಿಧ ರೂಪದಲ್ಲಿ ದೊರೆಯುತ್ತಿದ್ದು, ಹೊರ ದೇಶಗಳಿಂದಲು ಕಳ್ಳ ಸಾಗಣೆಯಾಗುತ್ತಿದೆ. ಇದರ ಸೇವನೆ ಹಾಗೂ ಕಳ್ಳ ಸಾಗಣೆ ಮಾಡುವುದು ಅಪರಾಧವಾಗಿದ್ದು, ಈ ಅಪರಾಧದಲ್ಲಿ ಪಾಲ್ಗೊಂಡರೆ ಕಾನೂನಿನಡಿ ಕಠಿಣ…

Read More

ಬಳ್ಳಾರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ

ಬಳ್ಳಾರಿ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಶಿಎನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಪಂಪ್, ಉಪಕರಣ ತಂತ್ರಜ್ಞರಿಗೆ ಇಂಧನ ದಕ್ಷತಾ ಕಾರ್ಯಗಾರ ಕುರಿತು ಏರ್ಪಡಿಸಿದ್ದ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಗಾರದಲ್ಲಿ ಇಂಧನ ಅಭಿವೃದ್ಧಿ ನಿಯಮಿತ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರವೀಂದ್ರನಾಥ್ ಎಸ್.ಬಳ್ಳಿ ಭಾಗವಹಿಸಿ ಅವರು ಮಾತನಾಡಿದರು.ಕಾರ್ಯಾಗಾರದ ಉಪಯೋಗ ಪಡೆದು, ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಬೇಕು ಎಂದರು.ಇದೇ ವೇಳೆ ತರಬೇತುದಾರರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.ಈ…

Read More

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಇವರಿಂದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಬುಧವಾರ ರಂದು ಜರುಗಿದ ಚಿಕ್ಕೋಡಿ ತಾಲೂಕು ಮಟ್ಟದ ಜನಸ್ಪಂಧನ ಕಾರ್ಯಕ್ರಮದಲ್ಲಿ ಸಾರ್ವಜನಿಕ ಅರ್ಜಿಗಳನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸ್ವೀಕರಿಸಿ ಅವರು ಮಾತನಾಡಿದರು. ಆಡಳಿತವೆ ಜನರ ಮನೆ ಬಾಗಿಲಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸ್ಪಂಧನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ಸಾರ್ವಜನಿಕರಿಂದ ಸ್ವೀಕೃತವಾದಂತಹ ಅಹವಾಲುಗಳಿಗೆ ತ್ವರಿತವಾಗಿ ಪರಿಹಾರ ಕಲ್ಪಿಸುವುದು ಹಾಗೂ ಸಾರ್ವಜನಿಕರು ಸರಕಾರಿ ಕಚೇರಿಗೆ ಅಲೆದಾಡುವದನ್ನು ತಪ್ಪಿಸುವದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ…

Read More