Prashanth Angadi

ಉಳವಿ ಚನ್ನಬಸವೇಶ್ವರ ದೇವಸ್ಥಾನ ರಸ್ತೆ ದುರಸ್ತಿಗೆ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಬೆಳಗಾವಿ : ಉಳವಿ ಚೆನ್ನಬಸವೇಶ್ವರ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆ ಹದಗೆಟ್ಟಿದ್ದು ಭಕ್ತರು ತೊಂದರೆ ಅನುಭವಿಸುತ್ತಿದ್ದು ಕೂಡಲೇ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು ಸೋಮವಾರ ಭೇಟಿಯಾದ ಕರವೇ ಸದಸ್ಯರು ಸುಕ್ಷೇತ್ರ ಉಳವಿ ದೇವಸ್ಥಾನಕ್ಕೆ ಧಾರವಾಡ ಹುಬ್ಬಳ್ಳಿ ಬೆಳಗಾವಿ ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರ ಆಗಮಿಸುತ್ತಾರೆ ಮಳೆಯಿಂದ ಫೋಟೋಳ್ಳಿ ಕ್ರಾಸ್ ನಿಂದ ಗುಂದ ಮಾರಕವಾಗಿ ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ…

Read More

ಮಾಜಿ ಪ್ರಧಾನಿ ಡಾ|| ಮನಮೋಹನ ಸಿಂಗ್ ರವರಿಗೆ ಶ್ರದ್ಧಾಂಜಲಿ

ಡಾ. ಮನಮೋಹನ್ ಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಡಾ. ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಮನಮೋಹನ್…

Read More

ಕೂಡ್ಲಿಗಿ:ಮಾಜಿ ಪ್ರಧಾನಿ ದಿ॥ಡಾ॥ಮನಮೋಹನ್ ಸಿಂಗ್ ರವರಿಗೆ ಶ್ರದ್ಧಾಂಜಲಿ

ವಿಜಯನಗರ ಜಿಲ್ಲೆ ಕೂಡ್ಲಿಗಿ: ಡಿ27ರಂದು ಬೆಳಿಗ್ಗೆ ಪಟ್ಟಣದ ಹಲವೆಡೆ ಮತ್ತು ತಾಲೂಕಿನ ವಿವಿದೆಡೆಗಳಲ್ಲಿ. ಡಿ26ರಂದು ನಿಧನರಾದ ಮಾಜಿ ಪ್ರಧಾನಿಗಳು, ಹಾಗೂ ಭಾರತೀಯ ಅರ್ಥಶಾಸ್ತ್ರಜ್ಞರಾದ. ದಿ” ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪಟ್ಟಣದ ಮದಕರಿ ವೃತ್ತದಲ್ಲಿ ಕಾಂಗ್ರೇಸ್ ಪಕ್ಷದ ಮುಖಂಡರು ಸೇರಿದಂತೆ, ವಿವಿದ ಪಕ್ಷಗಳ ಮುಖಂಡರು ವಿವಿದ ಜನಪ್ರತಿನಿಧಿಗಳು ಹಿರಿಯನಾಗರೀಕರು. ದಿವಂಗತ ಮಾಜಿ ಪ್ರಧಾನಿಗಳಾದ ದಿ”ಡಾ॥ ಮನಮೋಹನ್ ಸಿಂಗ್ ರವರಿಗೆ, ನುಡಿನಮನ ಹಾಗೂ ಶ್ರದ್ಧಾಂಜಲಿ ಅರ್ಪಿಸಿದರು. ಮನಮೋಹನ ಸಿಂಗ್ ರವರ ಭಾವಚಿತ್ರಕ್ಕೆ ಪುಷ್ಪ…

Read More

ಸಮುದಾಯ ವಿಜ್ಞಾನ ಮಹಾವಿದ್ಯಾಲಯ; ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಫೀಲ್ಡ್ ಇನ್ವೆಸ್ಟಿಗೇಟರ್ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2024 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ 0836-2214234 ಹಾಗೂ ಕೃವಿವಿ ಜಾಲತಾಣ www.uasd.edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ…

Read More

ಜಲ್ ಜೀವನ ಮಿಷನ್-ನಲ್ ಜಲ್ ಮಿತ್ರ ಯೋಜನೆಯಡಿ ಸ್ವಸಹಾಯ ಸಂಘದ ಸದಸ್ಯರಿಗೆ ತರಬೇತಿ

ಧಾರವಾಡ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಧಾರವಾಡ ಹಾಗೂ ಜಿಲ್ಲಾ ಪಂಚಾಯತ ಸಹಯೋಗದೊಂದಿಗೆ ಜಲ್ ಜೀವನ ಮಿಷನ್‍ದ ನಲ್ ಜಲ್ ಮಿತ್ರ ಯೋಜನೆಯಡಿಯಲ್ಲಿ ನೀರು ವಿತರಣಾ ನಿರ್ವಾಹಕರು ಜಾಬ್ ರೋಲ್-ನಲ್ ಜಲ್ ಮಿತ್ರ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಧಾರವಾಡ ತಾಲೂಕಿನ ಮುಮ್ಮಿಗಟ್ಟಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ 24…

Read More

ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಜರುಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಧಾರವಾಡ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನಿಂದ ಶ್ರೀ ಡಿ.ವ್ಹಿ.ಹಾಲಭಾವಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್‍ಗ್ಯಾಲರಿಯಲ್ಲಿ ಚಿತ್ರಕಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ದಾವಣಗೇರಿ ವಿಶ್ವವಿದ್ಯಾಲಯ ದೃಶ್ಯ ಕಲಾ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಜೈರಾಜ ಎಂ. ಚಿಕ್ಕಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದ ತುಡಿತದೊಂದಿಗೆ ತಮ್ಮ ಸೃಜನಾತ್ಮಕ ಕಲೆಯನ್ನು ಬೆರೆಸುವ ಮೂಲಕ ಕಲಾವಿದರು ಶ್ರೇಷ್ಠ ಕಲಾಕೃತಿಗಳನ್ನು ರಚಿಸಬೇಕು….

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅನಧಿಕೃತ ಮೊರಂ ಗಣಿಗಾರಿಕೆ ಮಾಡಿದ 2 ಟಿಪ್ಪರ್, 3 ಟ್ರ್ಯಾಕ್ಟರ್ ಜಪ್ತಿ

ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಇಂದು ಸಂಜೆ ದಾಳಿ ನಡೆಸಲಾಯಿತು. ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3…

Read More

ಬೆಟಗೇರಿ:ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಸದಸ್ಯರಿಗೆ ಪ್ರಮಾಣ ಪತ್ರ ಚುನಾವಣಾಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಡಿ.೨೬ರಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಬಸವಂತ ಕೋಣಿ, ನೂತನ ಉಪಾಧ್ಯಕ್ಷರಾಗಿ ರೇವಣಸಿದ್ದ ಸವತಿಕಾಯಿ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ.ಗ್ರಾಮದ ವಿಪ್ರಾಗ್ರಾಕೃಎಸ್ ಸಂಘಕ್ಕೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸದಸ್ಯರಾಗಿ ನೂತನವಾಗಿ ಆಯ್ಕೆಗೊಂಡ ಚುನಾಯಿತ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಎಸ್.ಬಿ.ಬಿರಾದಾರ ಪಾಟೀಲ ವಿತರಿಸಿದರು.ಸಂಘದ ಕಳೆದ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷ ಮತ್ತು…

Read More

ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ. ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ‌ ಅವರು ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ,…

Read More

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು. ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ…

Read More