ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು
1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದ ಅವರು, ಲಕ್ಷ್ಮಣ ಸವದಿ ನಮ್ಮ ಮಿತ್ರರು. ಅವರು ಎಷ್ಟು ಬುದ್ಧಿವಂತರೆಂದರೆ ಈ ಏಳು ತಿಂಗಳಲ್ಲಿ ಎರಡು…
