Prashanth Angadi

ಮತದಾರರ‌ ಚೀಟಿ ವಿತರಿಸಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೊಂಧಳಿ ಗಲ್ಲಿಯ ಮನೆ ಮನೆಗೆ ತೆರಳಿ ಮತದಾರರ ಚೀಟಿ ವಿತರಿಸಿದರು. ಈ‌ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಮತದಾರರು ತಮ್ಮ ಹೆಸರಿರುವ ಮತಗಟ್ಟೆಗಳನ್ನು ಗುರುತಿಸಲು ಮತದಾರರ ಚೀಟಿಯಿಂದ ಅನುಕೂಲವಾಗಲಿದೆ.ಮತಗಟ್ಟೆಗಳ ಬಗ್ಗೆ ಖಚಿತ ಮಾಹಿತಿ ಲಭಿಸುವುದರಿಂದ ಮತದಾನದ ದಿನದಂದು ಮತಗಟ್ಟೆ ಹುಡುಕುವ ಗೊಂದಲ ಇರುವುದಿಲ್ಲ…

Read More

ಮೇ 07 ರಂದು ಜರುಗಲಿರುವ ಚುನಾವಣೆಯಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಅವರು ಕರೆ ನೀಡಿದರು.

ಚಿಕ್ಕೋಡಿ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಕುಂಬ ಮೇಳ ಜಾಥಾ ಕಾರ್ಯಕ್ರಮಕ್ಕೆ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ ಚಾಲನೆ ನೀಡಿ ಅವರು ಮಾತನಾಡಿದರು ಎಲ್ಲ ಮತದಾರರು ತಪ್ಪದೇ ಮತ ಚಲಾಯಿಸುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳುತ್ತದೆ. ಮತದಾನದಿಂದ ಯಾರು ಕೂಡಾ ಹೊರಗುಳಿಯದೇ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು. ಒಬ್ಬ ಮಹಿಳೆ ಕನಿಷ್ಠ ಹತ್ತು ಜನರಿಗಾದ್ರೂ ಮತದಾನ ಮಾಡುವಂತೆ ಪ್ರೇರೆಪಸಿಬೇಕು ಎಂದು ಕುಂಬ ಮೇಳದಲ್ಲಿ ಪಾಲ್ಗೊಂಡ ಮಹಿಳೆಯರಿಗೆ ತಿಳಿಸಿದರು. ಕಡ್ಡಾಯವಾಗಿ ಮತದಾನ…

Read More

ವಿಶ್ವ ಹಿಂದೂ ಪರಿಷತದಿಂದ ರಾಮೋತ್ಸವ ಹಾಗೂ ಮತದಾನೋತ್ಸವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ ಗುರುವಾರ ಸಾಯಂಕಾಲ ಕಿಲಬನೂರ ಗ್ರಾಮದಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ ನಡೆಸಲಾಯಿತು ಇದೇ ಸಂದರ್ಭದಲ್ಲಿ ರಾಮದುರ್ಗ ತಾಲೂಕಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀ ಪ್ರಕಾಶ ಸೂಳಿಭಾವಿ ಅವರು ಮತದಾನೋತ್ಸವ ಬಗ್ಗೆ ಮಾತನಾಡಿ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಿದರು.ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಭಾವಿಕಟ್ಟಿ ಅವರು ಮರ್ಯಾದಾ ಪುರೋಷತ್ತಮ ಶ್ರೀರಾಮನ ಬಗ್ಗೆ ಉಪನ್ಯಾಸ ನೀಡಿದರು.ಸಂದರ್ಭದಲ್ಲಿ: ಪ್ರಭು ಬಾಳಿಕಾಯಿ, ಅಪ್ಪನ್ನಗೌಡ ಪಾಟೀಲ, ಗೌರಮ್ಮ ರಾವಳ, ಪ್ರೇಮಾ ಚವ್ವನ್ನವರ ಹಾಗೂ ಕಿಲಬನೂರ ಗ್ರಾಮದ…

Read More

ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದಲ್ಲಿ ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಮಾತನಾಡಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಸಿಐಟಿಯು ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ವಹಿಸಿ ಅವರು ಮಾತನಾಡಿದರು. ಹಿಂದೆ ಬಂಡವಾಳ ಶಾಹಿಗಳ ವಿರುದ್ಧ ಯಾವ ರೀತಿ ಹೋರಾಟ ನಡೆದಿತ್ತು ಅದೇ ರೀತಿಯಲ್ಲಿ ಇನ್ನೊಂದು ಹೋರಾಟ ನಡೆಯಬೇಕಾಗಿದೆ. ಏಕೆಂದರೆ ಕಾರ್ಮಿಕರು ಗುಲಾಮರಲ್ಲ ಅವರು ಮಾಡುವ ಕೆಲಸಕ್ಕೆ ತಕ್ಕಂತೆ ವೇತನ ಸಿಗುತ್ತಿಲ್ಲ. ನಾವೆಲ್ಲರೂ ಚಿಕಾಗೋ ನಗರದಲ್ಲಿ ನಡೆಸಿದಂತಹ ಹೋರಾಟಕ್ಕೆ ಸಜ್ಜಾಗಬೇಕೆಂದು ಆಗ್ರಹಿಸಿದರು.ನಿಖಿಲ ಕುಲಕರ್ಣಿ…

Read More

ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

ಲೈಂಗಿಕವಾಗಿ ಮಹಿಳೆಯರನ್ನು ಬಳಸಿಕೊಂಡ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಜನಪರ ಸಂಘಟನೆಗಳು ಸಮ್ಮುಖದಲ್ಲಿ ರಾಮದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.ಪ್ರತಿಭಟನಾಕಾರನ್ನು ಉದ್ದೇಶಿಸಿ ಸಿಐಟಿಯು ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ್ ಮಾತನಾಡಿ, ಇತ್ತಿಚೇಗೆ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಕೊಲೆಗಳು ನಡೆಯುತ್ತಿರುವುದು ಮಾನವ ಸಮಾಜಕ್ಕೆ ನಾಚಿಕೆ ತರುವಂತಹದ್ದು. ಕಳೆದ ಕೆಲವು ದಿನಗಳಿಂದ ಹಾಸನದಲ್ಲಿ ಪೆನ್ ಡ್ರೆöÊವ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ…

Read More

ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆ

ದುರಹಂಕಾರಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.ರಾಮದುರ್ಗ ತಾಲೂಕಿನ ಸುರೇಬಾನ ಹಾಗೂ ಬಟಕುರ್ಕಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಅವರ ಪರ ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಮತಯಾಚನೆ ಮಾಡಿದ ಅವರು, ಕಳೆದ ೧೦ ವರ್ಷಗಳಿಂದ ಉತ್ತಮ ಆಡಳಿತ ನಡೆಸಿದ ಮೋದಿ ಅವರನ್ನು ಕೆಳಗೆ ಇಳಿಸಲು…

Read More

ಹಾಟ್ ಏರ್ ಬಲೂನ್ ಹಾರಾಟದ ಮೂಲಕ ಮತದಾನ ಜಾಗೃತಿ

ಬೆಳಗಾವಿ ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಮತದಾನದ ಜಾಗೃತಿಗಾಗಿ ಹಾಟ್ ಏರ್ ಬಲೂನ್ ಹಾರಾಟ ಹಾಗೂ ಬೆಳಗಾವಿ ಜಿಲ್ಲೆ ಮತದಾನ ಜಾಗೃತಿ ಮಾಸ್ಕಾಟ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತ ಕ್ಷೇತ್ರಗಳ ಚುನಾವಣೆ ಮೇ.07 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನದ ಸಮಯ ನಿಗದಿ ಪಡಿಸಲಾಗಿದೆ. ಎಲ್ಲ ಮತದಾರರು ಕಡ್ಡಾಯವಾಗಿ…

Read More

ಅಕ್ರಮಗಳ ದೂರು: ತಕ್ಷಣವೇ ಸ್ಪಂದಿಸಲು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು.

ಬೆಳಗಾವಿ, ಚುನಾವಣಾ ಅಕ್ರಮಗಳ ಕುರಿತು ಸಿವಿಜಿಲ್ ಮೂಲಕ ಬರುವ ಅಥವಾ ಸಾರ್ವಜನಿಕರು ನೀಡುವ ಯಾವುದೇ ದೂರುಗಳನ್ನು ನಿರ್ಲಕ್ಷ್ಯ ಮಾಡದೇ ತಕ್ಷಣವೇ ಪರಿಶೀಲನೆ ಕೈಗೊಳ್ಳಬೇಕು ಎಂದು ವಿಶೇಷ ವೆಚ್ಚ ವೀಕ್ಷಕರಾದ ಬಿ.ಮುರುಳಿಕುಮಾರ್ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಚುನಾವಣಾಧಿಕಾರಿಗಳು‌, ವೆಚ್ಚ ವೀಕ್ಷಕರು ಹಾಗೂ ವಿವಿಧ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು‌ ಮಾತನಾಡಿದರು. ಮತದಾನ ದಿನಾಂಕ ಸಮೀಪಿಸುತ್ತಿರುವುದರಿಂದ ಅಕ್ರಮಗಳ ತಡೆಗೆ ತೀವ್ರ ನಿಗಾ ವಹಿಸಬೇಕು. ಯಾವುದೇ‌ ದೂರು ಅಥವಾ ಮಾಹಿತಿ ಬಂದಾಗ ಕೂಡಲೇ ಸ್ಥಳಕ್ಕೆ…

Read More

ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಲು ವೆಚ್ಚ ವೀಕ್ಷಕರ ಸೂಚನೆ

ಬೆಳಗಾವಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಹರಕ್ರಿಪಾಲ್ ಖಟಾನಾ ಅವರು, ದಿನಪತ್ರಿಕೆ, ಟಿವಿ ಚಾನೆಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಪ್ರತಿಯೊಂದು ಚುನಾವಣಾ ಸುದ್ದಿ‌ ಹಾಗೂ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು. ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಚುನಾವಣಾ ಜಾಹೀರಾತುಗಳಿಗೆ…

Read More

ಮನೆ ಮನೆಗೆ ಹೋಗಿ ಮತದಾರರ ಚೀಟಿ ನೀಡಲು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಸೂಚನೆ.

ಜಿಲ್ಲಾಧಿಕಾರಿ‌ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಹಾಯಕ ಚುನಾವಣಾಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಮಾತನಾಡಿದರು.ಮತದಾನ ದಿನ ಸಮೀಪಿಸುತ್ತಿರುವುದರಿಂದ ಚುನಾವಣಾ ಸಿಬ್ಬಂದಿ ಕೂಡಲೇ ಮನೆ ಮನೆಗೆ ತೆರಳಿ ಮತದಾರರ ಚೀಟಿ ವಿತರಣೆ ಮಾಡಬೇಕು ಎಂದು ಹೇಳಿದರು.ಮತದಾನ ಜಾಗೃತಿಗಾಗಿ ಅನೇಕ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರಕವಾಗಿ ಬಿಎಲ್.ಓ.ಗಳು ಮನೆ‌ಮನೆಗೆ ತೆರಳಿ ಮತದಾರರ ಚೀಟಿ ವಿತರಿಸುವುದರಿಂದ ಮತದಾನ‌ ಪ್ರಮಾಣ ಹೆಚ್ಚಿಸಲು ಸಾಧ್ಯವಾಗಲಿದೆ.ಕಳೆದ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ತಪ್ಪದೇ…

Read More