ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರಿಕಾಗೋಷ್ಠಿ
ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಬಸವರಾಜ ಹೊರಟ್ಟಿ ಮಾತನಾಡಿದರು. ಬೆಳಗಾವಿಯಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲ ಅಧಿವೇಶನ ಯಶಸ್ವಿಗೆ ಹಾಗೂ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ಪರಿಷತ್ ಸದಸ್ಯರಿಗೆ ಅನೇಕ ಸಲಹೆಗಳನ್ನು ನೀಡಲಾಗಿದೆ. ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆಯ ನಂತರ ಸಂಪೂರ್ಣ ಕಿತ್ತೂರ ಕಲ್ಯಾಣ ಪ್ರಾಂತ್ಯಗಳ ಅಭಿವೃದ್ಧಿ ಕುರಿತು ಚಿಂತನೆ ನಡೆಸಲು ಸದಸ್ಯರಿಗೆ ಸಲಹೆ ನೀಡಲಾಗಿದೆ ಈ ಬಾರಿ ಪರಿಷತ್ತಿನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ…
