ಮಾದಕ ವಸ್ತುಗಳಿಂದ ದೂರವಿದ್ದು ಕುಟುಂಬ, ರಾಷ್ಟ್ರ ರಕ್ಷಣೆಗೆ ಮುಂದಾಗಬೇಕು: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ ಇಂದಿನ ಯುವ ಜನತೆ ಮಾದಕ ವಸ್ತುಗಳನ್ನು ದೂರವಿಟ್ಟು, ಆರೋಗ್ಯಕರ ಜೀವನವನ್ನು ನಡೆಸುವ ಮೂಲಕ ತಮ್ಮ ಕುಟುಂಬ ಮತ್ತು ದೇಶ ರಕ್ಷಣೆಗೆ ಮುಂದಾಗಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಯುವ ಸಮುದಾಯಕ್ಕೆ ಕರೆ ನೀಡಿದರು. ಪೋಲಿಸ್ ಇಲಾಖೆ ವತಿಯಿಂದ ನಗರದ ಸಂಗೋಳ್ಳಿ ರಾಯಣ್ಣ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಮಂಗಳವಾರ ಜರುಗಿದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ “ಬೇಡ ಬ್ರೋ” ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು….
