11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ
ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಯ ಸಹಯೋಗದಲ್ಲಿ ಶನಿವಾರ ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ “11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಕಾರ್ಯಕ್ರಮದಲ್ಲಿ ಸಂಸದ ಜಗದೀಶ್ ಶೆಟ್ಟರ ಭಾಗವಹಿಸಿ ಅವರು ಮಾತನಾಡಿದರು. ಈ ಬಾರಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಘೋಷವಾಕ್ಯದೊಂದಿಗೆ ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು. ಇಡೀ ವಿಶ್ವದಾದ್ಯಂತ…
