ಸಂವಿಧಾನ ಜಾಗೃತಿ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ
ಬೆಳಗಾವಿ, ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ ಸಂವಿಧಾನ ಜಾಗೃತಿ ಜಾಥಾಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಿದ್ದರು. ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಯನ್ನು ಒಳಗೊಂಡಂತೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ವಿವಿಧ ಘಟನಾವಳಿಗಳ ಮೇಲೆ ಬೆಳಕು ಚೆಲ್ಲುವ ಎರಡು ಆಕರ್ಷಕ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ ಸಂಚರಿಸಿದ್ದವು. ಗ್ರಾಮ ಪಂಚಾಯಿತಿ, ನಗರ…
