ಬೆಳಗಾವಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ
ಬೆಳಗಾವಿ, ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಪಾರದರ್ಶಕತೆಯಿಂದ ಕೈಗೊಳ್ಳುವಂತೆ ಕಾರ್ಯದರ್ಶಿಗಳು ಸಹಕಾರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಸಂಜಯ ಶೆಟ್ಟಣ್ಣವರ ಅವರು ಸೂಚಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶನಿವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆ ಪ್ರಕ್ರಿಯೆ ರಾಜ್ಯಾದ್ಯಂತ ಪ್ರಾರಂಭವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ಜರುಗಲಿರುವ…
