ಬೆಳಗಾವಿ ಮಹಾನಗರ ಪಾಲಿಕೆಗೆ ವಿಶೇಷ ಅನುದಾನ ಕೋರಿ ಮೇಯರ್ ಪ್ರೀತಿ ಕಾಮಕರ್ ಹಾಗೂ ಉಪಮೇಯರ್ ಹಣಮಂತ ಕೊಂಗಾಲಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಅರ್ಪಿಸಿದರು.
ಬೆಳಗಾವಿ : ರಾಜ್ಯದ ಎರಡನೇ ರಾಜಧಾನಿ ಎಂದೇ ಪರಿಗಣಿಸಲ್ಪಡುವ ಬೆಳಗಾವಿನಗರದ ಸೌಂದರ್ಯೀಕರಣ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಇಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದ ಖರ್ಚು ವೆಚ್ಚಕ್ಕಾಗಿ ಬೆಳಗಾವಿ ಮಹಾನಗರ ಪಾಲಿಕೆಗೆರೂ.250 ಕೋಟಿ ವಿಶೇಷ ಅನುದಾನವನ್ನು ನೀಡಬೇಕೆಂದು ಕೋರಿಇತ್ತೀಚೆಗೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆಗಾಗಿ ಬೆಳಗಾವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹಣಮಂತ ಕೊಂಗಾಲಿ ಸುವರ್ಣ ವಿಧಾನಸೌಧದಲ್ಲಿ ಮನವಿ ಅರ್ಪಿಸಿದರು.ಬೆಳಗಾವಿಯಲ್ಲಿ ಪ್ರತಿ ವರ್ಷ ನಡೆಯುವ ವಿಧಾನ ಮಂಡಲ…
