ಬೆಳಗಾವಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಿರಬೇಕು: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ, : ಕಳೆದ ಮೂರು ದಿನಗಳಿಂದ ನೆರೆಯ ಮಹಾರಾಷ್ಟ್ರ ಹಾಗೂ ಬೆಳಗವಾಇ ಜಿಲ್ಲೆಯ ಒಂಭತ್ತು ತಾಲೂಕುಗಳಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಜು.7) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನದಿ ಪಾತ್ರಗಳಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ…
