ಲೋಕಾಯುಕ್ತ: ಬಾಕಿ ಪ್ರಕರಣಗಳ ವಿಚಾರಣೆ-ವಿಲೇವಾರಿ
ಬೆಳಗಾವಿ ಸಮಾಜದಲ್ಲಿ ಭ್ರಷ್ಟಾಚಾರ ಎಂಬ ಭೂತವನ್ನು ನಾವೆಲ್ಲರೂ ಕೂಡಿ ಬೆಳೆಸಿಕೊಂಡು ಬಂದಿದ್ದೇವೆ. ಭ್ರಷ್ಟಾಚಾರವನ್ನು ಬರೀ ಲೋಕಾಯುಕ್ತ ಸಂಸ್ಥೆಯಿಂದ ನಿರ್ಮೂಲನೆ ಮಾಡುವುದು ಸಾಧ್ಯವಿಲ್ಲ; ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರ ನಿರ್ಮೂಲನೆಗೆ ಸಂಕಲ್ಪ ಮಾಡಬೇಕು ಎಂದು ಕರ್ನಾಟಕ ಉಪ ಲೋಕಾಯುಕ್ತರಾದ ನ್ಯಾಯನೂರ್ತಿ ಬಿ.ವೀರಪ್ಪ ಕರೆ ನೀಡಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶುಕ್ರವಾರ(ಅ.30) ನಡೆದ ಬೆಳಗಾವಿ ಮತ್ತು ಬೈಲಹೊಂಗಲ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕಿ ಜ್ಯೋತಿ ಬೆಳಗಿಸುವದರೊಂದಿಗೆ ಉದ್ಘಾಟಿಸಿ…
