ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಅನುದಾನ ನೀಡಿ: ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ
ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜ ಹಾಗೂ ಕಲಬುರಗಿ ತಾಲೂಕು ಹಡಪದ ಸಮಾಜದ ವತಿಯಿಂದ ಬೆಂಗಳೂರು ನಗರದಲ್ಲಿ ಹಡಪದ ಅಪ್ಪಣ್ಣ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸಿ, ನಿಗಮಕ್ಕೆ ಕನಿಷ್ಠ ₹100 ಕೋಟಿ ಅನುದಾನ ಮೀಸಲಿಡುವಂತೆ ಆಗ್ರಹಿಸಿ .ಇಂದು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಶಿವರಾಜ್ ತಂಗಡಗಿ ಅವರಿಗೆ ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಹಾಗೂ ಕಲಬುರಗಿ ತಾಲೂಕು ಸಮಿತಿಯ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು….
