ಸಂಗೊಳ್ಳಿ ರಾಯಣ್ಣ ವಸತಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ: ಆಹಾರ ಗುಣಮಟ್ಟ, ಸ್ವಚ್ಛತೆ ಪರಿಶೀಲನೆ
ಬೆಳಗಾವಿ, ರಾಜ್ಯ ಲೋಕಾಯುಕ್ತದ ಮಾನ್ಯ ಉಪ ಲೋಕಾಯುಕ್ತರಾದ ಬಿ. ವೀರಪ್ಪ ಅವರು ಶನಿವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಶೋಕ ನಗರದ ವಸತಿ ನಿಲಯಕ್ಕೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯ ಹಾಗೂ ಆಹಾರ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅಡುಗೆ ಕೋಣೆ, ವಿದ್ಯಾರ್ಥಿಗಳಿಗೆ ನೀಡುವ ಅಲ್ಪಾಹಾರ ಹಾಗೂ ಊಟದ ಗುಣಮಟ್ಟವನ್ನು ಪರಿಶೀಲಿಸಿ ಮಾಹಿತಿ ಪಡೆದರು. ವಸತಿ ಶಾಲೆಯಲ್ಲಿ ಒಟ್ಟು 120 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅಗತ್ಯವಿರುವಷ್ಟು ಹಾಸಿಗೆಗಳನ್ನು (ಬೆಡ್)…
