ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್ ಸಹಯೋಗದೊಂದಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ.
ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಜೈಂಟ್ಸ ಗ್ರುಫ್ ಸಹಯೋಗದೊಂದಿಗೆ ಎಮ್.ಎಲ್.ಇ.ಎಸ್. ಆಂಗ್ಲ ಮಾದ್ಯಮ ಶಾಲೆ, ಮುನವಳ್ಳಿಯಲ್ಲಿ “ನಾಲ್ಸಾ (ಸಾಗಾಣಿಕೆ ಮತ್ತು ವಾಣಿಜ್ಯ ಲೈಂಗಿಕ ಶೋಷಣೆಯ ಬಲಿಪಶುಗಳು) ಯೋಜನೆ-2015” ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹವ್ಮಿುಕೊಳ್ಳಲಾಗಿತ್ತು. ಪ್ರಧಾನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಪಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶಾಲಾ ವಿದ್ಯಾರ್ಥಿಗಳು ಸಾಮಾನ್ಯ ಕಾನೂನುಗಳ…
