ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್
ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಬೃಹತ್ ಮೆರವಣಿಗೆ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುಂಚೆ ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬುಧವಾರ ಬೆಳಗಾವಿಯ ಸಮಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಸಮಾದೇವಿಗಲ್ಲಿಯಿಂದ ಆರಂಭವಾದ ಮೆರವಣಿಗೆಯ ಖಡೆಬಜಾರ ರೋಡ್, ಗಣಪತಿ ಗಲ್ಲಿ, ಕಾಕತಿವೇಸ್, ಶನಿವಾರ ಕೂಟ್, ಚನ್ನಮ್ಮ ವೃತ್ತ ಹಾಗೂ ಜಿಲ್ಲಾಧಿಕಾರಿ ಕಚೇರಿ ವರೆಗೆ ಸಾಗಿತು. ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮೆರವಣಿಗೆ ವಾಹನ…
