ವಿರಾಟ ವಿಶ್ವಕರ್ಮರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಪುರಸಭೆಯ ಸಾಂಸ್ಕೃತಿಕ ಸಭಾ ಭವನದಲ್ಲಿ ಹಮ್ಮಿಕೊಂಡ ವಿರಾಟ ವಿಶ್ವಕರ್ಮರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯವನ್ನು ತೊಂಡಿಕಟ್ಟಿ ಅವಧೂತ ಗಾಳೇಶ್ವರ ಮಠದ ಅಭಿನವ ವೆಂಕಟೇಶ್ವರ ಮಹಾರಾಜರು ವಹಿಸಿ ಮಾತನಾಡಿದ ಅವರು, ವಿಶ್ವಕರ್ಮರು ಗ್ರಾಮ ದೇವಿಯ ಆರಾಧಕರು. ಆದ್ದರಿಂದ ತಾವುಗಳು ಎಲ್ಲರೂ ಒಳ್ಳೆಯ ಮಾರ್ಗದಿಂದ ಸಾಗಬೇಕು. ಅಂದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದರು.ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ, ಸಮಾಜದ ಜನರು ಒಗ್ಗಟ್ಟಾಗಿ ಸಾಗಬೇಕು. ವಿಶ್ವಕರ್ಮರೆ ಮೊದಲ ಇಂಜೀನಿಯರ್. ಇವರು ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವದರ ಜೊತೆಗೆ…
