Prashanth Angadi

ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ರ್ಅವರಿಗೆ ಸನ್ಮಾನ ಸಮಾರಂಭ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ಆರಿಬೆಂಚಿ ಸಭಾಭವನದಲ್ಲಿ ಬಣಜಿಗ ಕ್ಷೇಮಅಭಿವೃದ್ಧಿ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ನೂತನ ಸಂಸದ ಹಾಗೂಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಅವರಿಗೆ ಸನ್ಮಾನ ಸಮಾರಂಭ ನಡೆಯಿತು.ಪ್ರತಿಭಾ ಪುರಸ್ಕಾರ ಸಮಾರಂಭಕಾರ್ಯಕ್ರಮದ ಉದ್ಘಾಟನೆಯನ್ನು ಸ್ಥಳೀಯಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ ನೆರವೇರಿಸಿ ದರು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ತಾಲೂಕಘಟಕದ ಅಧ್ಯಕ್ಷರಾದ ಜಿಎನ್ ಮುತ್ತೂರುಅವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿಮಾಜಿ ಶಾಸಕ…

Read More

ಮುಖ್ಯಮಂತ್ರಿಗಳ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಮಂಜೂರಾತಿಯನ್ನು ವಿರೋಧಿಸಿ ವಿಧಾನಸಭೆ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ ಪಟ್ಟಣ ಅವರ ನೇತೃತ್ವದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಾರ್ವಜನಿಕರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು. ಶಾಸಕರ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ರಾಮದುರ್ಗ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಮಿನಿ ವಿಧಾನಸೌಧಕ್ಕೆ ತೆರಳಿ ಸಮಾವೇಶಗೊಂರು.ಪ್ರತಿಭಟನಾಕಾರನ್ನು ಉದ್ದೇಶಿಸಿ ವಿಧಾನಸಭೆ…

Read More

ಬೆಳಗಾವಿ ಜಿಲ್ಲೆಯಲ್ಲಿ ನಕಲಿ ದಾಖಲೆ ನೀಡಿ ರೇಷನ್‌ ಕಾರ್ಡ್‌ ಪಡೆದವರಿಗೆ ಬರೋಬ್ಬರಿ 1,88,75,946 ರೂ. ದಂಡ ವಸೂಲಿ ಮಾಡಲಾಗಿದೆ.

ಯಾರೆಲ್ಲಾ ಬಿಪಿಎಲ್‌ ಕಾರ್ಡ್‌ ಅನರ್ಹರು?ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ಸರ್ಕಾರಿ ನೌಕರರು. ಅಂದರೆ ಸರ್ಕಾರದ ಅಥವಾ ಸಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು.ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕ ಮನೆಯನ್ನು ಸ್ವಂತವಾಗಿ…

Read More

ಸಮಾಜದ ತಾರತಮ್ಯಗಳನ್ನು ತೆಗೆದುಹಾಕಲು ನಾರಾಯಣ ಗುರು ಅವರು ತಮ್ಮ ಇಡಿ ಜೀವನವನ್ನು ಮುಡಿಪಾಗಿಟ್ಟಿದ್ದರು ; ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.

ದಾರವಾಡ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಉದ್ಘಾಟಿಸಿ ಅವರು ಮಾತನಾಡಿದರು. ನಾರಾಯಣಗುರು ಅವರು 1850 ರಂದು ಕೇರಳದಲ್ಲಿ ನಾರಾಯಣ ಗುರು ಅವರು ಜನಿಸಿದರು. ಇದೇ ಸಮಯದಲ್ಲಿ ಅಲ್ಲಿ ಜಾತಿ, ಧರ್ಮ, ಮೇಲು, ಕೀಳು ತಾರತಮ್ಯ ಹೆಚ್ಚು ಸಮಾಜದಲ್ಲಿ ಕಾಡುತಿತ್ತು, ನಾರಾಯಣ ಗುರುಗಳು ಜನ್ಮ ತಾಳಿ ಅಲ್ಲಿನ…

Read More

ಡಿ. ದೇವರಾಜ ಅರಸು ಅವರು ಸಾಮಾಜಿಕ ನ್ಯಾಯದ ಹರಿಕಾರ; ಜಿಲ್ಲಾಧಿಕಾರಿ ದಿವ್ಯ ಪ್ರಭು

ದಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾದ ಡಿ. ದೇವರಾಜು ಅರಸು ಅವರ 109 ನೇ ಜನ್ಮ ದಿನಾಚರಣೆಯ ಅಂಗವಾಗಿ ಡಿ. ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ದೇವರಾಜು ಅರಸು ಅವರಂತಹ ವ್ಯಕ್ತಿಗಳು ಇದ್ದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ. ದೇವರಾಜು…

Read More

ಬಳ್ಳಾರಿ ಜಿಲ್ಲಾಡಳಿತದಿಂದ ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೆರವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಮಂಗಳವಾರ ಏರ್ಪಡಿಸಿದ ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆಯ ಸಮಾರಂಭವನ್ನು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಉದ್ಘಾಟಿಸಿ ಅವರು ಮಾತನಾಡಿದರು.ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯದಲ್ಲಿ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದರು….

Read More

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಖೆ ಸಂಯುಕ್ತಾಶ್ರಯದಲ್ಲಿ ಜರುಗಿದ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ

ಬೆಳಗಾವಿ ನಗರದ ಕುಮಾರ ಗಂಧರ್ವ ರಂಗಂಮದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಖೆ ಸಂಯುಕ್ತಾಶ್ರಯದಲ್ಲಿ ಜರುಗಿದ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ ಉದ್ಘಾಟಿಸಿ ಅವರು ಮಾತನಾಡಿದರು. ಡಿ.ದೇವರಾಜ ಅರಸು ಅವರು ತಮ್ಮ‌ ಮುಖ್ಯಮಂತ್ರಿಗಳ ಆಡಳಿತಾವಧಿಯಲ್ಲಿ ಶೋಷಿತರನ್ನು ಮುಖ್ಯವಾಹಿನಿಗೆ ತರುವಲ್ಲಿ ಎಲ್ಲ ವಿರೋಧಗಳನ್ನು‌ ಮೀರಿ ಪ್ರಯತ್ನಿಸಿ ತಮ್ಮ ಛಾಪನ್ನು ಮೂಡಿಸಿದ್ದರು ಎಂದರು. ಅರಸುರವರು ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಅನೇಕ ಕ್ರಾಂತಿಕಾರಿಕ…

Read More

ಬೆನಕನಹಳ್ಳಿ ಡೊಂಬರ ಕಾಲನಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

ಬೆಳಗಾವಿ ಹಿಂಡಲಗಾ ರಸ್ತೆಯಲ್ಲಿರುವ ಬೆನಕನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಡೊಂಬರ ಕಾಲೋನಿಗೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಅಲ್ಲಿನ ಅವ್ಯವಸ್ಥೆಯ ಕುರಿತು ಅಸಮಾಧಾನ‌ ವ್ಯಕ್ತಪಡಿಸಿದರು. ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು ಡೊಂಬರ ಕಾಲನಿಯ ಜನರಿಗೆ ಕೂಡಲೇ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ದಿನನಿತ್ಯ ಕುಡಿಯುವ ನೀರಿನ ವ್ಯವಸ್ಥೆ ಸರಿಪಡಿಸಬೇಕು; ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕನ್ನಡ ಮಾಧ್ಯಮ ಶಾಲೆಯನ್ನು ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು…

Read More

ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಮಹಿಳಾ‌ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ‌ಚೌಧರಿ ಭೇಟಿ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ತಕ್ಷಣವೇ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಹಾಗೂ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಗೆ ಮಂಗಳವಾರ ಭೇಟಿ ನೀಡಿದ ಅವರು, ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಶುದ್ಧ ಕುಡಿಯುವ ನೀರು, ಬೀದಿದೀಪ ವ್ಯವಸ್ಥೆಯನ್ನು ಸರಿಪಡಿಸಬೇಕು; ಹೊರ ರೋಗಿಗಳ ವಿಭಾಗದಲ್ಲಿ ಶೌಚಾಲಯ ವ್ಯವಸ್ಥೆ ಒದಗಿಸಬೇಕು; ಕರ್ತವ್ಯನಿರತ ವೈದ್ಯರಿಗೆ ಸುಸಜ್ಜಿತ…

Read More

ಜೆಎನ್ಎಂಸಿ ವಿದ್ಯಾರ್ಥಿನಿಯರ ಜತೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸಂವಾದ

ಬೆಳಗಾವಿ ಕೆ.ಎಲ್‌.ಇ. ಸಂಸ್ಥೆಯ ಜವಾಹರಲಾಲ್ ನೆಹರೂ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು, ಮಹಿಳೆಯರ ಸಮಸ್ಯೆಗಳು ಮತ್ತು ಅವುಗಳನ್ನು ಎದುರಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿನಿಯರು ಹಾಗೂ ಮಹಿಳಾ ಬೋಧಕಿಯರಿಗೆ ಕರ್ತವ್ಯ ನಿರ್ವಹಿಸುವಾಗ ಎದುರಾಗುವ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅವರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ಸಮಸ್ಯೆಗಳು ಎದುರಾದರೆ ತಕ್ಷಣವೇ ಪೊಲೀಸ್ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು.ಒಂದು ವೇಳೆ ಸ್ಥಳೀಯವಾಗಿ…

Read More