ಹುಬ್ಬಳ್ಳಿ, ನವಲಗುಂದ ತಾಲೂಕಿನಲ್ಲಿ ಮಳೆ, ಹಾನಿ ಪ್ರವಾಹ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಬೇಟಿ.
ಧಾರವಾಡ ಹುಬ್ಬಳ್ಳಿ ಮತ್ತು ನವಲಗುಂದ ಸೇರಿದಂತೆ ತಾಲೂಕಿನ ಕರ್ಲವಾಡ, ಆರೇಕುರಟ್ಟಿ, ಯಮನೂರ ಗ್ರಾಮಗಳ ಹತ್ತಿರ ಬೆಣ್ಣಿಹಳ್ಳದ ಪ್ರವಾಹದಿಂದ ಅಪಾರ ಪ್ರಮಾಣದ ನೀರು ಬಂದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದ ಮತ್ತು ಹಾನಿಯಾದ ಪ್ರದೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹಾಗೂ ಶಾಸಕ ಎನ್. ಎಚ್. ಕೋನರಡ್ಡಿ ಅವರು ವೀಕ್ಷಣೆ ಮಾಡಿದರು. ರಸ್ತೆ, ಬ್ರಿಜ್ ಹಾಗೂ ಇತರ ಸಾರ್ವಜನಿಕ ಮೂಲ ಸೌಕರ್ಯಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ತ್ವರೀತವಾಗಿ ದುರಸ್ತಿ, ಮರು ನಿರ್ಮಾಣ ಕಾಮಗಾರಿಗಳನ್ನು…
