ಬರ ಪರಿಹಾರ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್ ಗಡುವು
ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿ ಕರ್ನಾಟಕಕ್ಕೆಬಿಡುಗಡೆ ಮಾಡಿರುವ ಅನುದಾನ ಕುರಿತು ಎರಡು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿ ಬಿ.ಆರ್.ಗವಾಯಿ ಅವರಿದ್ದ ಏಕಸದಸ್ಯ ಪೀಠ, ಪರಿಹಾರ ಬಿಡುಗಡೆ ಮಾಡಿರುವ ಕುರಿತು ಎರಡು ವಾರದಲ್ಲಿ ವರದಿ ನೀಡಬೇಕೆಂದು ಸೂಚಿಸಿದೆ.ಇದೇ ವೇಳೆ ನ್ಯಾಯಪೀಠ ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ…
