ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ರಂದು ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ, ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಸೇರಿದಂತೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀಳಬಹುದಾದ ಮರಗಳನ್ನು ಗುರುತಿಸಿ ಕೂಡಲೇ…
