ಬೆಳಗಾವಿ ಜಿಲ್ಲೆಯ ರಣಕುಂಡೆ ಗ್ರಾಮದ ಬಳಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಅಬಕಾರಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ.
ಅಬಕಾರಿ ಸಿಪಿಐ ಮಂಜುನಾಥ ಮೆಳ್ಳಿಗೇರಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 205 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 3 ಲಕ್ಷ 12 ಸಾವಿರ ರೂಪಾಯಿಗಳು…
